Breaking News

ವಿಜಯಪುರ: ಚಲಿಸುತ್ತಿದ್ದ ರೈಲಿನಿಂದ ಹಾರಿ ಯುವಕ ಆತ್ಮಹತ್ಯೆ

Spread the love

ವಿಜಯಪುರ: ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನಿಡಗುಂದಿ ಹಾಗೂ ಬಸವನ ಬಾಗೇವಾಡಿ ರೈಲು ಮಾರ್ಗದ ಮಧ್ಯೆ ನಡೆದಿದೆ.

 

ಸುಮಾರು 25-30 ವರ್ಷದ ಯುವಕ ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್‌ ರೈಲಿನಿಂದ ಕೆಳಗೆ ಹಾರಿದ್ದಾನೆ. ಗಾಯಾಳುವನ್ನು ತಕ್ಷಣ ರೈಲ್ವೆ ಪೊಲೀಸರು ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಆತ್ಮಹತ್ಯೆ ಮಾಡಿಕೊಂಡ ಯುವಕನ ಹೆಸರು, ವಿಳಾಸ ಇನ್ನೂ ಪತ್ತೆಯಾಗಿಲ್ಲ. ವಿಜಯಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ