ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಸಿಲಿಂಡರ್ ಬ್ಲಾಸ್ಟ್ ಆದ ಪರಿಣಾಮ 17 ಜನರಿಗೆ ಗಾಯವಾಗಿದೆ.
ದೋರನಹಳ್ಳಿ ಗ್ರಾಮದ ಯುಕೆಪಿ ಕ್ಯಾಂಪ್ ನಲ್ಲಿ ಈ ದುರ್ಘಟನೆ ಜರುಗಿದೆ.
ಯುಕೆಪಿ ಕ್ಯಾಂಪ್ ನ ನಿವೃತ್ತ ನೌಕರ ಸಾಹೇಬಗೌಡ ಅವರ ಮನೆ ಮುಂಭಾಗದಲ್ಲಿ ಘಟನೆ ನಡೆದಿದೆ. ಸಾಹೇಬ ಗೌಡ ಅವರ ಸೊಸೆಯ ಸೀಮಂತ ಕಾರ್ಯಕ್ರಮ ನಡೆಸಲಾಗುತಿತ್ತು.ಈ ವೇಳೆ ಅಡುಗೆ ಮಾಡಲು ತಂದಿಟ್ಟಿದ್ದ ಸಿಲಿಂಡರ್ ಸೋರಿಕೆಯಾಗಿ ಬ್ಲಾಸ್ಟ್ ಆಗಿದೆ.
ಲಿಂಡರ್ ಬ್ಲಾಸ್ಟ್ ನಿಂದ ಟೆಂಟ್, ಬೈಕ್ ಹಾಗೂ ಅಕ್ಕಪಕ್ಕದ ಮನೆಗಳಿಗೂ ಬೆಂಕಿ ತಗುಲಿದೆ. 12 ಮಕ್ಕಳು ಸೇರಿ 17 ಜನರಿಗೆ ಗಾಯವಾಗಿದೆ. ಗಾಯಗೊಂಡವರನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ರಾಗಾಪ್ರಿಯಾ ಭೇಟಿ ನೀಡಿ ಪರಿಶೀಲನೆ ಮಾಡಿದರು. ಸಿಲಿಂಡರ್ ಪೂರೈಕೆ ಮಾಡಿದ ಎಜೆನ್ಸಿ ವಿರುದ್ಧ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ.