Breaking News

ಬೈಕ್ ನಿಯಂತ್ರಣ ತಪ್ಪಿ ಅಪಘಾತ ಜವರಾಯನ ಪಾದ ಸೇರಿದ4 ಯುವಕರು

Spread the love

ಚಿಕ್ಕೋಡಿ: ಬೈಕ್ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು, ನಾಲ್ವರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ತಡರಾತ್ರಿ ನಡೆದಿದೆ.

Chikkodi

ಸಂಕೇಶ್ವರ ಪಟ್ಟಣದ ನಿವಾಸಿಗಳಾದ ಬಸವರಾಜ ಮಾಳಿ(29), ಪ್ರವೀಣ್ ಸನದಿ(26), ಮೆಹಬೂಬ ಶೇಗಡಿ(21), ಮಲಿಕ್ ಜಮಾದಾರ್(21) ಮೃತ ದುರ್ದೈವಿಗಳಾಗಿದ್ದಾರೆ.

ಗುರುವಾರ ತಡರಾತ್ರಿ ಒಂದೇ ಬೈಕಿನಲ್ಲಿ ನಾಲ್ವರು ಯುವಕರು ಮಹಾರಾಷ್ಟ್ರದ ಗಡಹಿಂಗ್ಲಜ್ ರಸ್ತೆ ಮಾರ್ಗದಿಂದ ಸಂಕೇಶ್ವರ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಪಕ್ಕದ ಗುಂಡಿಗೆ ನಾಲ್ವರು ಬಿದ್ದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿದ್ದಾರೆ.


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ