ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿ 35 ಬಣವಿಗೆ ಬೆಂಕಿ ತಗುಲಿ ಅಪಾರ ಹಾನಿಗೊಳಗಾದ ಕುಟುಂಬಸ್ಥರಿಗೆ ತಲಾ 10 ಸಾವಿರ ರೂ. ಪರಿಹಾರ ನೀಡುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರು ಘೋಷಣೆ ಮಾಡಿದ್ದಾರೆ.ಶುಕ್ರವಾರ ಹೊಸ ವಂಟಮುರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭೂತರಾಮನಹಟ್ಟಿ ಗ್ರಾಮದಲ್ಲಿ 35 ಬಣವಿಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಅಪಾರ ಪ್ರಮಾಣದ ಮೇವು ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಹಾನಿಗೊಳಗಾದ ಕುಟುಂಬಸ್ಥರಿಗೆ ತಲಾ 10 ಸಾವಿರ ರೂ. ಪರಿಹಾರವನ್ನು ಸತೀಶ ಜಾರಕಿಹೊಳಿ ಘೋಷಿಸಿದ್ದಾರೆ. ನಾಳೆ ಭೂತರಾಮನಹಟ್ಟಿ ಗ್ರಾಮಕ್ಕೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭೇಟಿ ನೀಡಿ ಹಾನಿಗೊಳಗಾದ ಕುಟುಂಬಸ್ಥರಿಗೆ ಪರಿಹಾರ ನೀಡಲಿದ್ದಾರೆ.
