ಹುಬ್ಬಳ್ಳಿ: ಮತ ಬ್ಯಾಂಕ್‌ಗಾಗಿ ಮುಸ್ಲಿಮರನ್ನು ಓಲೈಸುತ್ತಿರುವ ಕಾಂಗ್ರೆಸ್ ಮುಸ್ಲಿಮರ ಪಕ್ಷವೆಂದು ಬಹಿರಂಗವಾಗಿ ಘೋಷಣೆ ಮಾಡಲಿ ಎಂದು ಶಾಸಕ ಜಗದೀಶ ಶೆಟ್ಟರ್ ಸವಾಲು ಹಾಕಿದರು.
ಕಾಂಗ್ರೆಸ್ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಶನಿವಾರ ನಗರದಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು ‘ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯಾದರೂ ಯಾವೊಬ್ಬ ಕಾಂಗ್ರೆಸ್ ನಾಯಕರೂ ಮಾನವೀಯ ದೃಷ್ಟಿಯಿಂದಲೂ ಅವರ ಮನೆಗೆ ತೆರಳಿ ಸಾಂತ್ವನ ಹೇಳಲಿಲ್ಲ.ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳಿಗೆ ಕಾಂಗ್ರೆಸ್ ಕುಮ್ಮಕ್ಕು ನೀಡುತ್ತಿದೆ. ಕಾಂಗ್ರೆಸ್ ಮುಸ್ಲಿಮರ ಪಕ್ಷವೆಂದು ಘೋಷಿಸಿಕೊಂಡರೆ ಎಲ್ಲಾ ಹಿಂದುಗಳಾದರೂ ಒಂದಾಗುತ್ತಾರೆ’ ಎಂದರು.ತಾಕತ್ತು ಇದ್ದರೆ ಕಾಂಗ್ರೆಸ್‌ಗೆ ಬಜೆಟ್ ಅಧಿವೇಶನದಲ್ಲಿಯಾದರೂ ಸಕ್ರಿಯವಾಗಿ ಪಾಲ್ಗೊಳ್ಳಲಿ ಎಂದು ಸವಾಲು ಹಾಕಿದರು.