Breaking News

ಕನ್ನಡಿಗರ ರಕ್ಷಣೆಯ ಸಂಪೂರ್ಣ ವೆಚ್ಚ ಸರ್ಕಾರ ಭರಿಸಲಿದೆ: ಬೊಮ್ಮಾಯಿ

Spread the love

ಬೆಂಗಳೂರು: ಉಕ್ರೇನ್‍ನಲ್ಲಿರೋ ಕನ್ನಡಿಗರು ವಾಪಸ್ ಕರೆ ತರುವ ಸಂಪೂರ್ಣ ವೆಚ್ಚ ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಕನ್ನಡಿಗರ ರಕ್ಷಣೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಉಕ್ರೇನ್‍ನಿಂದ ಮೊದಲ ತಂಡ ಭಾರತಕ್ಕೆ ಆಗಮಿಸಿದೆ. ವೆಸ್ಟರ್ನ್ ಭಾಗದಲ್ಲಿ ಇದ್ದ ವಿದ್ಯಾರ್ಥಿಗಳು ಈಗ ಆಗಮಿಸಿದ್ದಾರೆ. ದೆಹಲಿ ಹೈ ಕಮಿಷನರ್ ಗೆ ಸೂಚನೆ ಕೊಟ್ಟಿದ್ದೇನೆ. ಮುಂಬೈಯಿಂದಲೂ ಕರೆ ತರಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು

ರಾಷ್ಟ್ರೀಯ ವಿಪತ್ತು ನಿರ್ವಹಣೆ ಅಧಿಕಾರಿಗಳು ದೆಹಲಿಯಲ್ಲಿ ಇದ್ದಾರೆ. ಅವರನ್ನು ಕರ್ನಾಟಕಕ್ಕೆ ತರುವ ಕೆಲಸ ಆಗುತ್ತದೆ. ಇದಕ್ಕೆ ತಗಲುವ ಸಂಪೂರ್ಣ ವೆಚ್ಚ ಸರ್ಕಾರವೇ ಭರಿಸಲಿದೆ ಎಂದು ಭರವಸೆ ಕೊಟ್ಟರು. ಕೇಂದ್ರದ ವಿದೇಶಾಂಗ ಸಚಿವರ ಜೊತೆ ಮಾತುಕತೆ ನಡೆಸಿದ್ದೇನೆ. ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಎರಡು ಹೆಲ್ಪ್ ಲೈನ್ ಈಗಾಗಲೇ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರ ಜೊತೆ ನಾನು ಮಾತಾಡಿದ್ದೇನೆ. ಎಲ್ಲ ಮಾಹಿತಿಗಳನ್ನು ಪಡೆದುಕೊಂಡಿದ್ದೇನೆ ಎಂದು ವಿವರಿಸಿದರು.


Spread the love

About Laxminews 24x7

Check Also

ಡಿಕೆಶಿ ಸಿಎಂ ಆಗುವ ಕನಸು ಮಾತ್ರ ಕಾಣಬೇಕು

Spread the loveಮಂಡ್ಯ : ಡಿಕೆಶಿ ಏನಿದ್ರು ಸಿಎಂ ಆಗುವ ಕನಸು ಕಾಣಬೇಕು ಅಷ್ಟೇ. ಡಿಕೆಶಿಗೆ ಕಾಂಗ್ರೆಸ್‌ನಲ್ಲಿ ಯಾರು ಬಿಟ್ಟು ಕೊಡ್ತಾರೆ? …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ