Breaking News

ಚನ್ನಮ್ಮಾಜಿಯಂತೆ ಕೆಳದಿ ರಾಣಿ ಚೆನ್ನಮ್ಮನವರ ಹೋರಾಟ, ಕ್ಷಮಾಗುಣ ಆದರ್ಶನೀಯ: ಬೊಮ್ಮಾಯಿ

Spread the love

ಕಿತ್ತೂರು ರಾಣಿ ಚೆನ್ನಮ್ಮನಂತೆ ಕೆಳದಿ ರಾಣಿ ಚೆನ್ನಮ್ಮನವರ ಹೋರಾಟ, ಕ್ಷಮಾಗುಣಗಳು ಆದರ್ಶನೀಯವಾಗಿದ್ದು, ಈ ಕುರಿತು ಪಠ್ಯದಲ್ಲಿ ಅಳವಡಿಸುವ ಚಿಂತನೆ ನಡೆಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಬೆಂಗಳೂರಿನ ಸಿಎಂ ಗೃಹ ಕಛೇರಿ ಕೃಷ್ಣಾದಲ್ಲಿ ಕೆಳದಿ ರಾಣಿ ಚೆನ್ನಮ್ಮನ ಪಟ್ಟಾಭಿಷೇಕದ 350ನೇ ವರ್ಷಾಚರಣೆ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚೆನ್ನಮ್ಮನವರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು. ಬಳಿಕ ಮಾತನಾಡಿದ ಅವರು ಮೂರು ಬಾರಿ ಮೊಘಲರು ಆಕ್ರಮಣ ಮಾಡಿದರೂ, ನಂತರ ಪ್ರಾಣ ಭಿಕ್ಷೆ ಬೇಡಿ ಬಂದಾಗ ಶಿವಾಜಿ ಮಹಾರಾಜ್ ಮಗ ರಾಜಾರಾಮನಿಗೆ ಆಶ್ರಯ ನೀಡಿ ಕ್ಷಮಿಸಿದ ಹೃದಯ ವೈಶಾಲ್ಯತೆ ಒಬ್ಬ ಮಹಿಳೆ ಕಂದಾಚಾರವನ್ನು ಬಿಟ್ಟು ಪ್ರಗತಿಪರವಾದ ಚಿಂತನೆಗಳಿಂದ ಆ ಕಾಲದಲ್ಲಿ ತನ್ನ ಗಟ್ಟಿ ನಿಲುವನ್ನು ತೋರಿದ ರೀತಿ, ದೂರದೃಷ್ಟಿ, ಕ್ಷಮಾಗುಣ ಹೊಂದಿದ್ದ ರೋಮಾಂಚನಕಾರಿಯಾಗಿದೆ. ಮುಂದಿನ ಪೀಳಿಗೆಯ ಮಕ್ಕಳಿಗೆ ಇವರ ಬಗ್ಗೆ ತಿಳಿಸುವ ಅಗತ್ಯವಿದೆ. ಹೀಗಾಗಿ ಕೆಳದಿ ರಾಣಿ ಚೆನ್ನಮ್ಮನವರ ಬಗ್ಗೆ ಪಠ್ಯದಲ್ಲಿ ಅಳವಡಿಸುವ ಕುರಿತು ಶಿಕ್ಷಣ ಇಲಾಖೆಯ ಸಂಬಂಧಪಟ್ಟವರೊಂದಿಗೆ ಚರ್ಚಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದರು.


Spread the love

About Laxminews 24x7

Check Also

ನಿಯಮ ಉಲ್ಲಂಘಿಸಿ ಶಾಸಕ ವೀರೇಂದ್ರ ಬಂಧನ-ವಕೀಲರ ವಾದ: ವಿಚಾರಣೆ ಮುಂದೂಡಿಕೆ

Spread the love ಬೆಂಗಳೂರು: ಆನ್​ಲೈನ್​ ಮತ್ತು ಆಫ್​ಲೈನ್ ಅಕ್ರಮ ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ಸಮನ್ಸ್ ಜಾರಿಗೊಳಿಸದೆ, ನಿಯಮಗಳನ್ನು ಉಲ್ಲಂಘಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ