ದ ರಾಜಕೀಯ ಪಕ್ಷಗಳು 2023ರ ವಿಧಾನಸಭೆ ಚುನಾವಣೆ ಸಿದ್ಧತೆ ಆರಂಭಿಸಿವೆ.
ಅವಧಿಗೆ ಮೊದಲೇ ರಾಜ್ಯದಲ್ಲಿ ಚುನಾವಣೆ ನಡೆಯಲಿದೆಯೇ? ಎಂಬ ಪ್ರಶ್ನೆ ಈಗ ಎದ್ದಿದೆ. ಸ್ವತಃ ಬಿಜೆಪಿಯೇ ಅವಧಿ ಪೂರ್ವ ಚುನಾವಣೆ ನಡೆಸುವ ಉತ್ಸಾಹದಲ್ಲಿದೆ.
ಉತ್ತರ ಪ್ರದೇಶ, ಪಂಜಾಬ್, ಉತ್ತರಾಂಖಡ, ಮಣಿಪುರ ಮತ್ತು ಗೋವಾ ರಾಜ್ಯಗಳ ವಿಧಾನಸಭೆ ಚುನಾವಣೆ ಸದ್ಯ ನಡೆಯುತ್ತಿದೆ. ಒಂದು ವೇಳೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಅವಧಿಗೆ ಮೊದಲೇ ಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ.
ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ ದೆಹಲಿಯಲ್ಲಿರುವ ಪಕ್ಷದ ನಾಯಕರು ಕರ್ನಾಟಕದಲ್ಲಿ ಅವಧಿಗೂ ಮೊದಲೇ ಚುನಾವಣೆ ನಡೆಸುವ ಕುರಿತು ತೀರ್ಮಾನ ಕೈಗೊಳ್ಳಲಿದ್ದಾರೆ. ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ 5 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
2022ರ ಅಂತ್ಯದಲ್ಲಿ ಗುಜರಾತ್, ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ರಾಜ್ಯಗಳ ಜೊತೆಗೆ ಕರ್ನಾಟಕಕ್ಕೆ ಸಹ ಚುನಾವಣೆ ನಡೆಸಿದರೆ ಒಟ್ಟಿಗೆ ಗೆಲುವು ಸಾಧಿಸಬಹುದು ಎಂಬುದು ಪಕ್ಷದ ನಾಯಕರ ಲೆಕ್ಕಾಚಾರವಾಗಿದೆ.