Breaking News

ಪ್ರಮೋದ್ ಮುತಾಲಿಕ್, ಚೈತ್ರಾಗೆ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ಹೇರಿ ಡಿಸಿ ಆದೇಶ

Spread the love

ಕಲಬುರಗಿ: ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫೆ.27 ರಿಂದ ಮಾ.3ರ ವರೆಗೆ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ ತಂದೆ ಹಣಮಂತರಾವ ಮುತಾಲಿಕ, ಕುಂದಾಪುರದ ಚೈತ್ರಾ ತಂ. ಬಾಲಕೃಷ್ಣ ನಾಯಕ್ ಅವರನ್ನು ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ಸಿ.ಆರ್.ಪಿ.ಸಿ ಕಾಯ್ದೆ-1973ರ ಕಲಂ-132, 143, 144 ಹಾಗೂ 144ಎ ರನ್ವಯ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಆದೇಶ ಹೊರಡಿಸಿದ್ದಾರೆ.

 

ಇದಲ್ಲದೆ ಜೇವರ್ಗಿ ತಾಲೂಕಿನ ಆಂದೋಲದ ಕರುಣೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ಸಹ ಫೆ. 27 ರಿಂದ ಮಾ.3ರ ವರೆಗೆ ಆಳಂದ ತಾಲೂಕು ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ.

ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಮಾರ್ಚ್ 1 ರಂದು ಸಂದಲ್ ಮತ್ತು ಶಬ್-ಏ-ಬರಾತ್ ಕಾರ್ಯಕ್ರಮ ಇದ್ದು, ಅದೇ ದಿನ ಮಹಾಶಿವರಾತ್ರಿ ಇರುವುದರಿಂದ ದರ್ಗಾದಲ್ಲಿರುವ ಶಿವಲಿಂಗದ ಶುದ್ಧೀಕರಣ ಕಾರ್ಯಕ್ರಮಕ್ಕೆ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಕರೆ ನೀಡಿದ್ದಾರೆ. 


Spread the love

About Laxminews 24x7

Check Also

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಹ್ವಾನ ವಿರೋಧಿಸಿ ಮತ್ತೆರಡು ಪಿಐಎಲ್ ಸಲ್ಲಿಕೆ

Spread the loveನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ರನ್ನು ಮುಖ್ಯ ಅತಿಥಿಯಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ