ಬೆಂಗಳೂರು : ಶಿವಮೊಗ್ಗ ಘಟನೆ ಮತ್ತು ಹಿಜಬ್ ಪ್ರಕರಣದ ವಿಚಾರಕ್ಕೆ ಕೂಡಲೇ ರಾಜ್ಯಪಾಲ ಮಧ್ಯೆ ಪ್ರವೇಶ ಮಾಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿ ಸರಣಿ ಟ್ವೀಟ್ ಮಾಡಿದ್ದಾರೆ. ರಾಜ್ಯಪಾಲರು ಮಧ್ಯೆ ಪ್ರವೇಶ ಮಾಡುವಂತೆ ಒತ್ತಾಯ ಮಾಡಿದ್ದಾರೆ.
ರಾಜ್ಯದಲ್ಲಿ ಶಾಂತಿ-ಭದ್ರತೆಗೆ ಅಪಾಯ ಎದುರಾಗಿದೆ. ಅಭಿವೃದ್ಧಿ, ಆವಿಷ್ಕಾರ, ಸೃಜನಶೀಲ, ವಿಜ್ಞಾನ-ತಂತ್ರಜ್ಞಾನಕ್ಕೆ ಹೆಸರಾದ ಕರ್ನಾಟಕ ಈಗ ವಿರುದ್ಧ ದಿಕ್ಕಿನಲ್ಲಿ ಜಗತ್ತಿನ ಗಮನ ಸೆಳೆದು ಕೃತಾರ್ಥವಾಗುತ್ತಿದೆ. ರಾಷ್ಟ್ರೀಯ ಪಕ್ಷಗಳೆರಡೂ ಕರ್ನಾಟಕದ ಪ್ರತಿಷ್ಠೆಗೆ ಕೊಳ್ಳಿ ಇಟ್ಟು ವಿಕೃತ ಕೇಕೆ ಹಾಕುತ್ತಿವೆ ಆಕ್ರೋಶ ಹೊರಹಾಕಿದ್ದಾರೆ.
ಶಿಕ್ಷಣದ ಕಾಶಿ ಕರ್ನಾಟಕದ ಶಾಲೆ-ಕಾಲೇಜುಗಳಲ್ಲಿ ಸಂಘರ್ಷದ ವಾತಾವರಣ ಸೃಷ್ಟಿಸಿ ಮಕ್ಕಳಲ್ಲಿ ದ್ವೇಷದ ವಿಷವುಕ್ಕಿಸಲಾಗುತ್ತಿದೆ. ಎರಡು ವರ್ಷದಿಂದ ಕೋವಿಡ್ ಹೊಡೆತದಿಂದ ಮಲಗಿರುವ ವಿದ್ಯಾರಂಗವನ್ನು ಸರ್ವನಾಶ ಮಾಡುವ ಹುನ್ನಾರವಷ್ಟೇ ಇದು. ಬಡವರ ಮಕ್ಕಳು ಓದಿ ವಿದ್ಯಾವಂತರಾಗಬಾರದೇ? ಎಂದು ಪ್ರಶ್ನೆ ಮಾಡಿದ್ದಾರೆ