Breaking News

ಅಮೆರಿಕ ಮಾದರಿ ರಸ್ತೆ ಸಂಪರ್ಕ ಜಾಲ ಅಭಿವೃದ್ಧಿ: ನಿತಿನ್ ಗಡ್ಕರಿ ಭರವಸೆ

Spread the love

ಬೆಳಗಾವಿ: ಭಾರತದ ರಸ್ತೆ ಜಾಲವನ್ನು 2024ರ ವೇಳೆಗೆ ಅಮೆರಿಕಕ್ಕೆ ಸರಿಸಮನಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದ್ದೇನೆ. ಪ್ರತಿಯೊಂದು ಅಭಿವೃದ್ಧಿಯು ರಸ್ತೆ ಸಂಪರ್ಕವನ್ನು ಅವಲಂಬಿಸಿದೆ. ಆದ್ದರಿಂದ ರಸ್ತೆ ಸಂಪರ್ಕ ಜಾಲವನ್ನು ಸದೃಢಗೊಳಿಸಲು ಸರಕಾರ ಬದ್ಧವಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಭಾರತ ಮಾಲಾ-2 ಯೋಜನೆಯಲ್ಲಿ ಈ ಭಾಗದ ಇನ್ನಷ್ಟು ಯೋಜನೆಗಳನ್ನು ಸೇರ್ಪಡೆ ಮಾಡಲಾಗುವುದು. ಹೊಸ ಮೇಲ್ಸೆತುವೆ ಪ್ರಸ್ತಾವವನ್ನು ಅಭಯ್ ಪಾಟೀಲ ನೀಡಿದ್ದರು. ಆದರೆ, ಸ್ಥಳೀಯ ಕಾರಣಗಳಿಂದ ಅದು ಸಾಧ್ಯವಾಗಿರುವುದಿಲ್ಲ. ಸ್ಥಳೀಯವಾಗಿ ಅಗತ್ಯ ಸಹಕಾರ ನೀಡಿದರೆ ಮುಂದುವರಿಸಲಾಗುವುದು ಎಂದರು.

ಈ ಭಾಗದ ಸಂಸದರು, ಶಾಸಕರು ವಿವಿಧ ರಸ್ತೆಗಳ ಅಭಿವೃದ್ಧಿ ಮಾಡಲು ಹಾಗೂ ಮೇಲ್ದರ್ಜೆಗೇರಿಸಲು ಮನವಿ ಸಲ್ಲಿಸಿದ್ದು, ಈ ಎಲ್ಲ ಪ್ರಸ್ತಾವನೆಗಳಿಗೆ ತಕ್ಷಣವೇ ಮಂಜೂರಾತಿ ನೀಡಲಾಗುವುದು. 9 ಸಾವಿರ ಕಿ.ಮೀ. ಉದ್ದದ ಗ್ರೀನಫೀಲ್ಡ್ ಹಾಗೂ ಹೆದ್ದಾರಿ ಕಾರಿಡಾರ್ ಯೋಜನೆಯನ್ನು 3ಲಕ್ಷ ಕೋಟಿಗೂ ಅಧಿಕ ವೆಚ್ಚದಲ್ಲಿ ಜಾರಿಗೊಳಿಸಲಾಗುತ್ತಿದೆ. ಇದರಲ್ಲಿ ಬೆಂಗಳೂರು-ಚೆನೈ ಯೋಜನೆ ಕೂಡ ಒಳಗೊಂಡಿದೆ. ದೆಹಲಿ-ಮುಂಬೈ ಹೆದ್ದಾರಿಯಲ್ಲಿ 120 ಕಿ.ಮೀ.ವೇಗದಲ್ಲಿ ವಾಹನ ಚಲಾಯಿಸಬಹುದು. ಇದರಿಂದ ಎರಡು ನಗರಗಳ ನಡುವಿನ ಪ್ರಯಾಣ ಅವಧಿ 12ಗಂಟೆಯಾಗಲಿದೆ. ಪುಣೆ-ಬೆಂಗಳೂರು ಹೆದ್ದಾರಿ ಅಂತರ ಕಡಿಮೆಗೊಳಿಸಲಿದೆ. ಭಾರತ ಮಾಲಾ-2 ಯೋಜನೆಯಲ್ಲಿರುವ ಪುಣೆ-ಬೆಂಗಳೂರು ರಸ್ತೆಯ ಈಗಿನ ಅಂತರವನ್ನು 100 ಕಿ.ಮೀ. ಕಡಿಮೆಗೊಳಿಸುವ ಯೋಜನೆ ರೂಪಿಸಲಾಗಿದೆ. ಮುಂದೆ ಇದು ಬೆಂಗಳೂರು-ಚೆನೈ ಹೆದ್ದಾರಿಗೆ ಸಂಪರ್ಕ ಕಲ್ಪಿಸಲಿದೆ ಎಂದು ವಿವರಿಸಿದರು. ಇದೇ ವೇಳೆ ಬೆಳಗಾವಿ-ಸಂಕೇಶ್ವರ ಬೈಪಾಸ್, ಸಂಕೇಶ್ವರ ಬೈಪಾಸ್-ಮಹಾರಾಷ್ಟ್ರ ಗಡಿಯವರೆಗೆ ಷಟ್ಪಥ ನಿರ್ಮಾಣ ಕಾಮಗಾರಿ; ಚೋರ್ಲಾ-ಜಾಂಬೋಟಿ-ಬೆಳಗಾವಿ ನಡುವಿನ ದ್ವಿಪಥ ಕಾಮಗಾರಿಗಳು ಚಾಲನೆ ನೀಡಲಾಗಿದೆ. ಇದರ ಜೊತೆಗೆ ವಿಜಯಪುರ-ಮುರಗುಂಡಿ(ಎನ್.ಎಚ್.548ಬಿ) ಹಾಗೂ ಸಿದ್ದಾಪುರ-ವಿಜಯಪುರ(ಎನ್.ಎಚ್.561ಎ) ಕಾಮಗಾರಿಗಳಿಗೆ ಕೇಂದ್ರ ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ ಅವರು ಶಂಕುಸ್ಥಾಪನೆ ನೆರವೇರಿಸಿದರು


Spread the love

About Laxminews 24x7

Check Also

ಕಾಲುಜಾರಿ ನಾಲೆಗೆ ಬಿದ್ದ ಬಾಲಕಿ, ರಕ್ಷಣೆಗೆ ಹೋದ ನಾಲ್ವರು ಸೇರಿ ಐವರು ಮಕ್ಕಳು ನೀರುಪಾಲು

Spread the loveಮಂಡ್ಯ: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿಯ ರಕ್ಷಣೆಗೆ ಮುಂದಾಗಿ, ಐವರು ಮಕ್ಕಳು ನೀರುಪಾಲಾದ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ