Breaking News

ಪುನೀತ್​ ರಾಜ್​ಕುಮಾರ್ ಅಭಿಮಾನಿಗಳಿಗೆ ಇಂದು (ಮಾರ್ಚ್​ 1) ವಿಶೇಷ ದಿನ.

Spread the love

ಪುನೀತ್​ ರಾಜ್​ಕುಮಾರ್ (Puneeth Rajkumar)​ ಅಭಿಮಾನಿಗಳಿಗೆ ಇಂದು (ಮಾರ್ಚ್​ 1) ವಿಶೇಷ ದಿನ.

ಅವರು ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ ‘ಜೇಮ್ಸ್​’ನ (James Movie) ಲಿರಿಕಲ್​ ಸಾಂಗ್​​, ‘ಟ್ರೇಡ್​ಮಾರ್ಕ್​..’ (Trademark Song) ಬೆಳಗ್ಗೆ 11:11ಕ್ಕೆ ರಿಲೀಸ್​ ಆಗುತ್ತಿದೆ. ಈ ವಿಚಾರವನ್ನು ಈ ಮೊದಲು ಚಿತ್ರತಂಡ ಘೋಷಣೆ ಮಾಡಿತ್ತು. ಹೀಗಾಗಿ, ಅಭಿಮಾನಿಗಳು ಈ ಸಾಂಗ್​ ಕೇಳೋಕೆ ಕಾದು ಕೂತಿದ್ದಾರೆ. ಈಗಾಗಲೇಟೀಸರ್​ ಮೂಲಕ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈಗ ಚಿತ್ರದ ಹಾಡು ಹೇಗಿರಲಿದೆ ಎಂಬುದನ್ನು ನೋಡೋಕೆ ಅಭಿಮಾನಿಗಳು ಕಾದಿದ್ದಾರೆ.

ಲಿರಿಕಲ್​ ಸಾಂಗ್​ ರಿಲೀಸ್ ಮಾಡುವಾಗ ಅದಕ್ಕೊಂದು ಸಿದ್ಧಸೂತ್ರವಿದೆ. ಸಿನಿಮಾದ ಸ್ಟಿಲ್​ಗಳನ್ನು ಹಾಕಿ, ಬ್ಯಾಕ್​ಗ್ರೌಂಡ್​ನಲ್ಲಿ ಸಾಂಗ್​ ಹಾಕಲಾಗುತ್ತದೆ. ಬಹುತೇಕರು ಹೀಗೆಯೇ ಮಾಡುತ್ತಾರೆ. ಆದರೆ, ‘ಟ್ರೇಡ್​ಮಾರ್ಕ್​’ ಲಿರಿಕಲ್​ ಸಾಂಗ್​ ಆ ರೀತಿಯಲ್ಲಿ ಇರುವುದಿಲ್ಲ ಎಂಬುದನ್ನು ಇತ್ತೀಚೆಗೆ ಚೇತನ್​ ಕುಮಾರ್ ಹೇಳಿದ್ದರು. ‘ಟ್ರೇಡ್​ಮಾರ್ಕ್​ ಸಾಂಗ್​ಅನ್ನು 5 ಗಾಯಕರು ಹಾಡಿದ್ದಾರೆ. ಫೋಟೋ ಮೇಲೆ ಲಿರಿಕ್ಸ್​ ಹಾಕಿ ರಿಲೀಸ್​ ಮಾಡುವ ಹಾಗೆ ರೆಗ್ಯುಲರ್​ ಆಗಿ ಇದನ್ನು ಬಿಡುಗಡೆ ಮಾಡಲ್ಲ. ತುಂಬ ವಿಶೇಷವಾದ ಕಲಾವಿದರು ಇದರಲ್ಲಿ ಪರ್ಫಾರ್ಮ್​ ಮಾಡಿದ್ದಾರೆ. ಅದರ ಜೊತೆಗೆ ಮೇಕಿಂಗ್​ ವಿಡಿಯೋ ಕೂಡ ಇರಲಿದೆ. ಮಾ.1ರಂದು ಎಲ್ಲ ಮಾಹಿತಿ ತಿಳಿಯಲಿದೆ. ಇ


Spread the love

About Laxminews 24x7

Check Also

ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

Spread the loveಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ