Breaking News

ಗ್ರಾಹಕರಿಗೆ ಮತ್ತೆ ಶಾಕ್​.. ಸಿಲಿಂಡರ್‌ಗಳ ಬೆಲೆ 105 ರೂ. ಏರಿಕೆ!

Spread the love

ದೆಹಲಿಯಲ್ಲಿ ಇಂದಿನಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ (19 ಕೆಜಿಯ ಸಿಲಿಂಡರ್​) ಬೆಲೆಯನ್ನು 105 ರೂ.ಗಳಷ್ಟು ಹೆಚ್ಚಿಸಲಾಗಿದೆ. ಇಂದಿನಿಂದ ದೆಹಲಿಯಲ್ಲಿ 19 ಕೆ.ಜಿಯ ಸಿಲಿಂಡರ್ ಬೆಲೆ 2,012 ರೂ. ಆಗಿರಲಿದೆ.

5 ಕೆಜಿ ಸಿಲಿಂಡರ್ ಬೆಲೆ 27 ರೂ.ನಷ್ಟು ಏರಿಕೆಯಾಗಿದೆ. ಹಾಗಾಗಿ 5 ಕೆಜಿ ಸಿಲಿಂಡರ್ ಬೆಲೆ 569 ರೂ. ಇರಲಿದೆ. ಆದರೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನಲ್ಲಿ ಯಾವುದೇ ಹೆಚ್ಚಳವಿಲ್ಲ.

ಎಲ್‌ಪಿಜಿ ಸಿಲಿಂಡರ್ ದರವನ್ನು ಭಾರತದ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಾಸಿಕವಾಗಿ ಪರಿಷ್ಕರಿಸಲಾಗುತ್ತದೆ. ಇನ್ನೂ ನ್ಯಾಷನಲ್ ಆಯಿಲ್ ಮಾರ್ಕೆಟಿಂಗ್ ಕಂಪನಿಗಳು ಫೆಬ್ರವರಿ 1 ರಿಂದ 19 ಕೆಜಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್ ಬೆಲೆಯನ್ನು 91.50 ರೂ.ಗಳಷ್ಟು ಕಡಿತಗೊಳಿಸಿದ್ದವು


Spread the love

About Laxminews 24x7

Check Also

ನಿಯಮ ಉಲ್ಲಂಘಿಸಿ ಶಾಸಕ ವೀರೇಂದ್ರ ಬಂಧನ-ವಕೀಲರ ವಾದ: ವಿಚಾರಣೆ ಮುಂದೂಡಿಕೆ

Spread the love ಬೆಂಗಳೂರು: ಆನ್​ಲೈನ್​ ಮತ್ತು ಆಫ್​ಲೈನ್ ಅಕ್ರಮ ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ಸಮನ್ಸ್ ಜಾರಿಗೊಳಿಸದೆ, ನಿಯಮಗಳನ್ನು ಉಲ್ಲಂಘಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ