ದಾವಣಗೆರೆ: ಆಂಜನೇಯನ ಜನ್ಮಭೂಮಿ ಹೈಜಾಕ್ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ವಿ.ಎಸ್.ಉಗ್ರಪ್ಪ ಕಿಡಿಕಾರಿದರು.
ಶ್ರೀ ಆಂಜನೇಯ ಜನ್ಮಭೂಮಿ ವಿವಾದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಂಗಾವತಿಯ ಕಿಷ್ಕಿಂದೆ ಆಂಜನಾದ್ರಿ ಬೆಟ್ಟವೇ ಹನುಮನ ನಿಜವಾದ ಜನ್ಮಭೂಮಿ. ತಿರುಪತಿಯಲ್ಲಿ ವಿನಾಕರಣ ವಿವಾದ ಸೃಷ್ಠಿ ಮಾಡಲಾಗುತ್ತಿದೆ. ಆಂಜನೇಯನ ಜನ್ಮಭೂಮಿಯನ್ನೆ ಹೈಜಾಕ್ ಮಾಡಲಾಗುತ್ತಿದೆ. ಕೋಟ್ಯಂತರ ಭಕ್ತರ ಭಾವನೆಯ ಪ್ರಶ್ನೆ ಇದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಪ್ರಧಾನಿ ಮೋದಿ ಅವರ ಶ್ರೀಮತಿಯವರು ಸಹ ಇಲ್ಲಿಗೆ ಭೇಟಿ ನೀಡಿದ್ದಾರೆ. ರಾಮ ಜನ್ಮಭೂಮಿ ಬಗ್ಗೆ ತಲೆಕೆಡಿಸಿಕೊಂಡಿದ್ದ ಬಿಜೆಪಿ ಇಲ್ಲಿ ಯಾಕೆ ಮೌನ ವಹಿಸಿದೆ. ಯಾಕೆ RSS ಕೇಂದ್ರ, ರಾಜ್ಯ ಸರ್ಕಾರ ಖಂಡಿಸುತ್ತಿಲ್ಲ? ಸುಮ್ಮನಿದ್ದರೆ ಒಪ್ಪಿಕೊಂಡಂತೆ ಅಲ್ವಾ ಎಂದು ವ್ಯಂಗ್ಯವಾಡಿದರು.