Breaking News

SSLC, PUC ಪರೀಕ್ಷೆ; ಕಡ್ಡಾಯ ಹಾಜರಾತಿ‌ ನಿಯಮವನ್ನು ಸಡಿಲಿಸಲು ಶಿಕ್ಷಣ ಇಲಾಖೆ ನಿರ್ಧಾರ

Spread the love

ಕೊರೋನಾ ಕಾರಣದಿಂದ ಕಳೆದೆರಡು ವರ್ಷ ಸರಿಯಾಗಿ ಶಾಲೆಗಳು ನಡೆದೇ ಇಲ್ಲ. ಹೀಗಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಮಾರ್ಚ್/ಏಪ್ರಿಲ್ ತಿಂಗಳಿಂದ ಶುರುವಾಗಲಿರುವ ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ.

ಅಂತಿಮ‌ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ, ಕಡ್ಡಾಯ ಹಾಜರಾತಿ‌ ನಿಯಮವನ್ನು ಸಡಿಲಿಸಲು ನಿರ್ಧರಿಸಿದೆ.

ಭೌತಿಕ ತರಗತಿಗಳ ಆರಂಭದ ವಿಳಂಬ, ಆನ್‌ಲೈನ್ ತರಗತಿಗಳ ಸಮಯದಲ್ಲಿ ನೆಟ್‌ವರ್ಕ್ ಸಮಸ್ಯೆಗಳನ್ನು ಪರಿಗಣಿಸಿ, ಈ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಲು 75% ಹಾಜರಾತಿಯನ್ನು ಕಡ್ಡಾಯಗೊಳಿಸದಿರಲು ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಮಾತನಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್, “ಈ ವರ್ಷದಲ್ಲಿ 75% ಹಾಜರಾತಿಯನ್ನು ಖಚಿತಪಡಿಸಿಕೊಳ್ಳುವುದು ಕಡ್ಡಾಯವಲ್ಲ. ಈ ವಿಚಾರವಾಗಿ ಕಾಲೇಜು ಮಟ್ಟದಲ್ಲಿ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಹಾಜರಾತಿ ಕೊರತೆಯಿಂದ ಪ್ರತಿ ವರ್ಷ ಕನಿಷ್ಠ 2,000 ರಿಂದ 4,000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವುದಿಲ್ಲ. ಕರ್ನಾಟಕ ಶಿಕ್ಷಣ ಕಾಯಿದೆ, 2006 ರ ನಿಯಮ 21, ವಿದ್ಯಾರ್ಥಿಗಳು 10 ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಲು 75% ಹಾಜರಾತಿಯನ್ನು ಕಡ್ಡಾಯಗೊಳಿಸುತ್ತದೆ. 


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ