ಬೆಂಗಳೂರು/ಹಾವೇರಿ: ಉಕ್ರೇನ್ ನಲ್ಲಿ ರಷ್ಯಾ ನಡೆಸಿದ ಬಾಂಬ್ ದಾಳಿಯಲ್ಲಿ ಮೃತಪಟ್ಟ ಕನ್ನಡಿಗ, ಹಾವೇರಿ ಜಿಲ್ಲೆ ಚಳಗೇರಿ ಗ್ರಾಮದ ನವೀನ್ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತರಿಸಲು ಅಗತ್ಯ ನೆರವು ಕಲ್ಪಿಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನವೀನ್ ತಂದೆ ಶೇಖರಪ್ಪ ಅವರಿಗೆ ಭರವಸೆ ನೀಡಿದ್ದಾರೆ.
ರಷ್ಯಾ-ಉಕ್ರೇನ್ ಯುದ್ಧದಲ್ಲಿ ಬಾಂಬ್ ದಾಳಿಗೆ ಬಲಿಯಾಗಿರುವ ಕರ್ನಾಟಕದ ನವೀನ್ ಕುಟುಂಬಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕರೆ ಮಾಡಿ ನವೀನ್ ತಂದೆಗೆ ಸಾಂತ್ವನ ಹೇಳಿದರು.
ನವೀನ್ ಕುಟುಂಬಕ್ಕೆ ಧೈರ್ಯ ಹೇಳಿದ ಮಾಜಿ ಮುಖ್ಯಮಂತ್ರಿ, ಮೃತದೇಹ ತರಿಸಲು ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಹಾಗೆ ಕುಟುಂಬದ ಜೊತೆ ನಾವಿದ್ದೇವೆ ಎನ್ನುವ ಅಭಯ ನೀಡಿದ್ದಾರೆ.
Laxmi News 24×7