Breaking News

ರಷ್ಯಾ ದಾಳಿಗೆ ಸಾವನ್ನಪ್ಪಿದ ನವೀನ್ ಕುಟುಂಬಕ್ಕೆ ಪರಿಹಾರ ನೀಡುತ್ತೇವೆ ಮೃತದೇಹವನ್ನು ಭಾರತಕ್ಕೆ ತರಲು ಕಷ್ಟ

Spread the love

ಬೆಂಗಳೂರು : ರಷ್ಯಾ ನಡೆಸಿದ ದಾಳಿಗೆ ಉಕ್ರೇನ್ ನಲ್ಲಿ ಕನ್ನಡಿಗ ವಿದ್ಯಾರ್ಥಿ ನವೀನ್ ಮೃತಪಟ್ಟಿದ್ದು, ನವೀನ್ ಕುಟುಂಬಕ್ಕೆ ಪರಿಹಾರ ನೀಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮೃತದೇಹವನ್ನು ಭಾರತಕ್ಕೆ ತರಲು ಪ್ರಯತ್ನಿಸುತ್ತೇವೆ.

ಯುದ್ಧ ನಡೆಯುತ್ತಿರುವ ಹಿನ್ನೆಲೆ ಸ್ವಲ್ಪ ಕಷ್ಟವಾಗುತ್ತಿದೆ ಅಂತ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೀನ್ ಮೃತದೇಹ ಹೋಲುವ ಕೆಲ ಫೋಟೋ ಬಂದಿದೆ. ನವೀನ್ ಸ್ನೇಹಿತರು ಫೋಟೋಗಳನ್ನು ಕಳುಹಿಸಿದ್ದಾರೆ. ಈ ಬಗ್ಗೆ ಭಾರತದ ರಾಯಭಾರ ಕಚೇರಿ ಜತೆ ಚರ್ಚೆ ಮಾಡುತ್ತೇನೆ.

ನವೀನ್ ಮೃತದೇಹದ ಫೋಟೋವನ್ನು ಅವರ ಸ್ನೇಹಿತರಿಗೆ ಕಳುಹಿಸಲಾಗಿದೆ. ಈ ಫೋಟೋ ಇದೀಗ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಸದ್ಯ ಖಾರ್ಕಿವ್ ನಲ್ಲಿ ನವೀನ್ ಮೃತದೇಹ ಇದ್ದು, ಇಂದು ಭಾರತಕ್ಕೆ ಸಾಗಿಸಲು ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಉಕ್ರೇನ್ ರಾಯಭಾರಿ ಕಚೇರಿ ಮೂಲಕ ನವೀನ್ ಪಾರ್ಥಿವ ಶರೀರ ವಾಪಸ್ ತರಲು ಯತ್ನ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ