Breaking News

ಮೋಜು ಮಸ್ತಿಗಾಗಿ ಬೈಕ್ ಕಳ್ಳತನಕ್ಕೆ ಇಳಿದಿದ್ದ ಆರೋಪಿ ಬಂಧನ

Spread the love

ನೆಲಮಂಗಲ: ವ್ಯವಸಾಯ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬ ಮೋಜು ಮಸ್ತಿಗಾಗಿ ಬೈಕ್ ಕಳ್ಳತನಕ್ಕೆ ಇಳಿದು ನೆಲಮಂಗಲ ಟೌನ್ ಪೊಲೀಸರ ಅತಿಥಿಯಾಗಿದ್ದಾನೆ. ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ದೊಡ್ಡತರಹಳ್ಳಿಯ ಸುನಿಲ್ ಅಲಿಯಾಸ್ ಸುನಿ (29) ಬಂಧಿತ ಆರೋಪಿಯಾಗಿದ್ದು, ಈತನಿಂದ ಒಟ್ಟು 11ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಊರಲ್ಲಿ ವ್ಯವಸಾಯ ಮಾಡ್ಕೊಂಡಿದ್ದ ಆರೋಪಿ ಸುನೀಲ್ ಮೋಜು ಮಸ್ತಿಗಾಗಿ ಬೈಕ್ ಕಳ್ಳತನಕ್ಕೆ ಇಳಿದಿದ್ದ. ಈತ ನೆಲಮಂಗಲ, ಮಾದನಾಯಕನಹಳ್ಳಿ, ಪೀಣ್ಯ, ಹಾಸನ , ಮೈಸೂರು ಕಡೆಗಳಲ್ಲಿ ಬೈಕ್ ಕಳ್ಳತನ ಮಾಡಿ ಅಂತರ ಜಿಲ್ಲಾ ಮಟ್ಟದ ಬೈಕ್ ಕಳ್ಳನಾಗಿದ್ದ. ಸದ್ಯ ಆರೋಪಿಯನ್ನ ಬಂಧಿಸಿ ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ