Breaking News
Home / ರಾಜಕೀಯ / ಕಾಂಗ್ರೆಸ್ ಪಾದಯಾತ್ರೆಗೆ ಹೈಕೋರ್ಟ್​ ಅಸಮಾಧಾನ: ಬೆಂಗಳೂರು ನಗರದಲ್ಲಿ ಪ್ರತಿಭಟನೆ ನಡೆಸದಂತೆ ತಾಕೀತು

ಕಾಂಗ್ರೆಸ್ ಪಾದಯಾತ್ರೆಗೆ ಹೈಕೋರ್ಟ್​ ಅಸಮಾಧಾನ: ಬೆಂಗಳೂರು ನಗರದಲ್ಲಿ ಪ್ರತಿಭಟನೆ ನಡೆಸದಂತೆ ತಾಕೀತು

Spread the love

ಬೆಂಗಳೂರು: ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಾದಯಾತ್ರೆಗೆ ಹೈಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿದ್ದು, ಬೆಂಗಳೂರು ನಗರದಲ್ಲಿ ಇನ್ಮುಂದೆ ಯಾವುದೇ ಪ್ರತಿಭಟನೆಗಳನ್ನು ಕೈಗೊಳ್ಳದಂತೆ ಆದೇಶ ಹೊರಡಿಸಿದೆ.

ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ಪೀಠದಿಂದ ಆದೇಶ ಹೊರಡಿಸಲಾಗಿದೆ. ಫ್ರೀಡಂಪಾರ್ಕ್​​ನಲ್ಲಿ ಪ್ರತಿಭಟನೆ ನಡೆಸುವ ವೇಳೆಯೂ ನಗರದ ಸಾರಿಗೆ-ಸಂಚಾರ ಹಾಗೂ ಜನರ ದಿನನಿತ್ಯದ ಚಟುವಟಿಕೆಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಸರ್ಕಾರಕ್ಕೆ ತಾಕೀತು ಮಾಡಿತು.

ಇಂದು ಹೈಕೋರ್ಟ್ ತಲುಪಲು ನಮಗೇ ಒಂದು ಗಂಟೆ ತಗುಲಿತು. ಜನಸಾಮಾನ್ಯರು ಓಡಾಡುವುದು ಹೇಗೆ? ಎಂದು ಪ್ರಶ್ನಿಸಿದ ಹೈಕೋರ್ಟ್​ ಇದಕ್ಕೆಲ್ಲಾ ನಿರ್ಬಂಧಗಳನ್ನು ವಿಧಿಸಿ ಎಂದು​ ಸರ್ಕಾರಕ್ಕೆ ಸೂಚನೆ ನೀಡಿತು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ