Breaking News

ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಇಂದು ಚೊಚ್ಚಲ ಬಜೆಟ್ ಮಂಡನೆ. 2022-23ನೇ ಸಾಲಿನ ಆಯವ್ಯಯವನ್ನು ಸಿಎಂ ಇಂದು ಮಂಡಿಸಲಿದ್ದು, ಹಲವು ನಿರೀಕ್ಷೆಗಳು ಗರಿಗೆದರಿವೆ.

Spread the love

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಮೊದಲ ಬಜೆಟ್​ನಲ್ಲಿ ಬೊಮ್ಮಾಯಿ ಯಾರಿಗೆ ಏನು ಕೊಡುತ್ತಾರೆ ಎಂಬ ಕುತೂಹಲ ಮೂಡಿದೆ.

ಇಂದು ಮಧ್ಯಾಹ್ನ 12.30 ರಿಂದ ಸಿಎಂ ವಿಧಾನಸಭೆಯಲ್ಲಿ 2022-23ನೇ ಸಾಲಿನ ಆಯವ್ಯಯ ಮಂಡಿಸಲಿದ್ದಾರೆ. ಇದಕ್ಕೂ ಮುನ್ನ ಬಜೆಟ್​ಗೆ ಅನುಮೋದನೆ ನೀಡಲು 12.10ಕ್ಕೆ ಸಚಿವ ಸಂಪುಟ ವಿಶೇಷ ಸಭೆ ನಡೆಯಲಿದೆ. ಬಜೆಟ್​ಗೂ ಮುನ್ನ ಸಿಎಂ ದೇವಾಲಯಕ್ಕೆ ತೆರಳಿ, ಪೂಜೆ ಸಲ್ಲಿಸಲಿದ್ದಾರೆ. ಆ ಬಳಿಕ ಆಯವ್ಯಯ ಪ್ರತಿ ಸ್ವೀಕರಿಸಿ ಬಜೆಟ್ ಮಂಡನೆಗೆ ಸಿಎಂ ತೆರಳಲಿದ್ದಾರೆ.

ಬಜೆಟ್ ಬಳಿ ಸಾಯಂಕಾಲ 4ಗಂಟೆಗೆ ಸಿಎಂ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ. ಹಾಗೆಯೇ ಇದೇ ವೇಳೆ 12.30ರಿಂದ ವಿಧಾನಪರಿಷತ್ ಕಲಾಪಗಳು ಕೂಡ ಆರಂಭವಾಗಲಿವೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ