Breaking News

BUDJET UPDATE ಬಳ್ಳಾರಿ, ಬೆಳಗಾವಿಯಲ್ಲಿ ಕೃಷಿ ಕಾಲೇಜು ನಿರ್ಮಾಣ: ಬಸವರಾಜ ಬೊಮ್ಮಾಯಿ

Spread the love

ಬೆಂಗಳೂರು, ಮಾರ್ಚ್ 04: ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತನ್ನ ಚೊಚ್ಚಲ ಬಜೆಟ್‌ ಅನ್ನು ಮಂಡನೆ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಕೃಷಿ ವಲಯಕ್ಕೆ ನೀಡುವ ಕೊಡುಗೆಗಳ ಪ್ರಸ್ತಾಪ ಮಾಡಿದ್ದಾರೆ. ಬಳ್ಳಾರಿ, ಬೆಳಗಾವಿಯಲ್ಲಿ ಹೊಸ ಕೃಷಿ ಕಾಲೇಜು ನಿರ್ಮಾಣ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

 

ಕೃಷಿ ಕ್ಷೇತ್ರಕ್ಕೆ ನೀಡುವ ಕೊಡುಗೆಗಳ ಪ್ರಸ್ತಾಪ ಮಾಡಿದ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಳ್ಳಾರಿ ಜಿಲ್ಲೆಯ ಹಗರಿ ಮತ್ತು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಹೊಸ ಕೃಷಿ ಕಾಲೇಜು ನಿರ್ಮಾಣ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹಾಗೆಯೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಹಾರ ಪಾರ್ಕ್ ಸ್ಥಾಪನೆ ಮಾಡಲಾಗುತ್ತದೆ. ರೈತರಿಗೆ ರಿಯಾಯಿತಿ ದರದಲ್ಲಿ 24 ಸಾವಿರ ಕೋಟಿ ರೂ. ಸಾಲ ನೀಡಲಾಗುತ್ತದೆ ಎಂದು ಬಸವರಾಜ ಬೊಮ್ಮಾಯಿ ತನ್ನ ಚೊಚ್ಚಲ ಬಜೆಟ್‌ನಲ್ಲಿ ಘೋಷಣೆ ಮಾಡಿದರು.

ಹಾವೇರಿಯ ಹಿರೆಕೆರೋರಿನಲ್ಲಿ ಗೋವಿನ ಜೋಳ ಸಂಶೋಧನಾ ಸಂಸ್ಥೆ ಸ್ಥಾಪನೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದರು. ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ 8,457 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಪ್ರಸ್ತಾಪ ಮಾಡಿದರು.ರೈತ ಶಕ್ತಿ ನೂತನ ಯೋಜನೆಯಡಿ ಕೃಷಿ ಯಂತ್ರೋಪಕರಣಗಳ ಬಳಕೆ ಉತ್ತೇಜನಕ್ಕೆ ಪ್ರತಿ ಎಕರೆಗೆ 250 ರೂ. ಡೀಸೆಲ್‌ಗೆ ಸಹಾಯಧನ ನೀಡಲಾಗುತ್ತದೆ. ಆಳ ಸಮುದ್ರ ಮೀನುಗಾರಿಗೆಗೆ ಪ್ರೋತ್ಸಾಹ ನೀಡಲಾಗುವುದು. 5 ಸಾವಿರ ಮೀನುಗಾರರಿಗೆ ರಾಜೀವ್‌ ಗಾಂಧಿ ಯೋಜನೆ ಯಡಿ ಮನೆ ನಿರ್ಮಾಣ ಮಾಡಲಾಗುವುದು ಎಂದು ಕೂಡಾ ರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ