Breaking News

ಮುಂದಿನ ವರ್ಷದಿಂದಲೇ ಎನ್‌ಇಪಿ ಜಾರಿ: ಹೊಸ ಪಠ್ಯ: ಬಜೆಟ್‌ನಲ್ಲಿ ಬೊಮ್ಮಾಯಿ ಘೋಷಣೆ

Spread the love

ಬೆಂಗಳೂರು, ಮಾ. 04: ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯಲು ಹೋಬಳಿ ಮಟ್ಟದಲ್ಲಿ ಸರ್ಕಾರದ ಮಾದರಿ ಶಾಲೆಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ ಚಿಂತನೆ ನಡಸಿದೆ.

 

ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೋಬಳಿ ಮಟ್ಟದ ಮಾದರಿ ಶಾಲೆ ನಿರ್ಮಾಣದ ಭರವಸೆಯನ್ನು ಘೋಷಣೆ ಮಾಡಿದರು. ಹೋಬಳಿ ಮಟ್ಟದಲ್ಲಿ ಮಾದರಿ ಶಾಲೆ ನಿರ್ಮಿಸುವ ಮೂಲಕ ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಣ ಇಲಾಖೆ ಪ್ರಸ್ತಾವನೆ ಸಲ್ಲಿಸಿತ್ತು. ಇದನ್ನು ಪರಿಗಣಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದಲ್ಲಿ ಹೋಬಳಿ ಮಟ್ಟದಲ್ಲಿ ಸರ್ಕಾರದ ಮಾದರಿ ಶಾಲೆಗಳನ್ನು ನಿರ್ಮಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.

\

ಎನ್‌ಇಪಿ ಜಾರಿ: ರಾಜ್ಯದಲ್ಲಿ ಪ್ರಸಕ್ತ 2022-23 ನೇ ಶೈಕ್ಷಣಿಕ ಸಾಲಿನಿಂದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗುತ್ತಿದ್ದು ಅದಕ್ಕೆ ಅನುಗುಣವಾಗಿ ನೂತನ ಪಠ್ಯಕ್ರಮ ಪರಿಚಯಿಸುವ ಘೋಷಣೆಯನ್ನು ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದ್ದಾರೆ. ದೇಶದಲ್ಲಿ ಮೊದಲ ಬಾರಿಗೆ ಉನ್ನತ ಶಿಕ್ಷಣದಲ್ಲಿ ಎನ್‌ಇಪಿಯನ್ನು ಕರ್ನಾಟಕ ಪ್ರಾಯೋಗಿಕವಾಗಿ ಅನುಷ್ಠಾನಕ್ಕೆ ತಂದಿತ್ತು. ಈ ಹಿನ್ನೆಲೆಯಲ್ಲಿ ಅನೇಕ ಸಮಸ್ಯೆಗಳನ್ನು ಉನ್ನತ ಶಿಕ್ಷಣ ಇಲಾಖೆ ಎದುರಿಸಿತ್ತು.

ಪ್ರಾಥಮಿಕ ಹಾಗೂ ಪದವಿ ಪೂರ್ವ ಶಿಕ್ಷಣ ಹಂತದಲ್ಲಿ ಎನ್‌ಇಪಿ ಅನುಷ್ಠಾನ ಸಂಬಂಧ ಶಿಕ್ಷಣ ಇಲಾಖೆ ನಿವೃತ್ತ ಇಲಾಖೆಯ ಹಿರಿಯ ಐಎಎಸ್ ಅಧಿಕಾರಿ ಮದನ ಗೋಪಾಲ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು . ಸಮಿತಿಯ ನಿರ್ದೇಶನ ಮೇರೆಗೆ 23 ಉಪ ಸಮಿತಿಗಳನ್ನು ರಚಿಸಿದ್ದು, ವರದಿಯನ್ನು ಸಲ್ಲಿಸಿವೆ. ಇದೀಗ ನೂತನ ಶಿಕ್ಷಣ ನೀತಿಯ ಸಂಬಂಧ ಹೊಸ ಪಠ್ಯಕ್ರಮ ಅಳವಡಿಸಲಾಗುವುದು


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ