ಶಿವಮೊಗ್ಗ, ಮಾ.3: ಬಜರಂಗದಳ ಕಾರ್ಯಕರ್ತ ಹರ್ಷ ಕಗ್ಗೊಲೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದುಃಖ ವ್ಯಕ್ತಪಡಿಸಿದ್ದಾರೆ. ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡುವುದಾಗಿ ತಿಳಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ಯಡಿಯೂರಪ್ಪ ಅವರು ಹರ್ಷ ನಿವಾಸಕ್ಕೆ ಭೇಟಿ ನೀಡುತ್ತಾರೆ. ಈ ವೇಳೆ ತಾವು ಮತ್ತು ಯಡಿಯೂರಪ್ಪ ಅವರು ಸರಕಾರದ ಪರವಾಗಿ 25 ಲಕ್ಷ ಪರಿಹಾರ ನೀಡುತ್ತೇವೆ. ವಿಶ್ವನಾಥ ಶೆಟ್ಟಿ ಕೊಲೆಯಾದಾಗ ಅವರ ಕುಟುಂಬಕ್ಕೆ ಬಿಜೆಪಿ ವತಿಯಿಂದ 18 ಲಕ್ಷ ರೂ. ತಲುಪಿಸಿತ್ತು. ಟೀಕೆ ಟಿಪ್ಪಣಿಗಳು ಸ್ವಾಭಾವಿಕ. ಆ ಸಂದರ್ಭದಲ್ಲಿ ನಮ್ಮ ಕರ್ತವ್ಯ ನಾವು ಮಾಡಿದ್ದೇವೆ. ವಿಶ್ವನಾಥ ಶೆಟ್ಟಿ ಕುಟುಂಬಕ್ಕೂ ಸಹ ಹಿಂದೂ ಸಮಾಜ ಏನೇನು ಸಹಾಯ ಮಾಡಬಹುದೋ ಅದನ್ನು ಮಾಡ್ತೇವೆ. ಕೆಲವು ಮುಸಲ್ಮಾನ್ ಗೂಂಡಾಗಳು ಗಾಜನೂರು ಬಳಿ ವಿಶ್ವನಾಥಶೆಟ್ಟಿ ಅವರ ಹತ್ಯೆ ನಡೆಸಿದ್ದರು ಎಂದರು.
