Breaking News

ದುಬಾರಿ ದುನಿಯಾದಲ್ಲಿ ಆಶಾ ಕಾರ್ಯಕರ್ತೆಯರಿಗೆ 1 ಸಾವಿರ ಗೌರವಧನ ಕಡಿಮೆ: ನಾಗಲಕ್ಷ್ಮಿ

Spread the love

ಬೆಂಗಳೂರು: ಇಂದಿನ ಬೆಲೆ ಏರಿಕೆಯ ಪರಿಸ್ಥಿತಿಯಲ್ಲಿ ಕೇವಲ 1 ಸಾವಿರ ಗೌರವಧನ ಹೆಚ್ಚಳ ಮಾಡಿರುವುದು ತೃಪ್ತಿ ತಂದಿಲ್ಲ ಅಂತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ನಾಗಲಕ್ಷ್ಮಿ ಹೇಳಿದ್ದಾರೆ.

ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಕೋವಿಡ್ ಸಮಯದಲ್ಲಿ ಆರೋಗ್ಯ ಇಲಾಖೆಯ ಆಧಾರ ಸ್ತಂಭವಾಗಿ ನಿಂತಿದ್ದು ಆಶಾ ಕಾರ್ಯಕರ್ತೆಯರು.‌ ರಾಜ್ಯದಲ್ಲಿ ಸುಮಾರು 42 ಸಾವಿರ ಆಶಾ ಕಾರ್ಯಕರ್ತೆಯರು ಇದ್ದು, ಗೌರವಧನ ಹೆಚ್ಚಳ ಮಾಡಿರುವುದನ್ನ ಸ್ವಾಗತ ಮಾಡುತ್ತೇವೆ ಎಂದರು.

ಕಳೆದ ಮೂರು ವರ್ಷಗಳಿಂದ ಕೋವಿಡ್ ವಿರುದ್ಧದ ಹೋರಾಟದಲ್ಲಿ ಪ್ರಾಣ ಪಣಕ್ಕಿಟ್ಟು ಕೆಲಸ ಮಾಡಿದ್ದೇವೆ.‌ ಆದರೆ, ಕೇವಲ ಒಂದು ಸಾವಿರ ರೂ. ಗೌರವ ಧನ ನೀಡಿರುವುದು ಸರಿಯಲ್ಲ. ಮಾಡಿದ ಕೆಲಸಕ್ಕೆ ತಕ್ಕ ಪ್ರತಿಫಲ ಸಿಗುವ ನಿರೀಕ್ಷೆಯನ್ನ ಈ ಸಲದ ಬಜೆಟ್​ನಲ್ಲಿ ಇಟ್ಟುಕೊಂಡಿದ್ದೆವು. ಕಳೆದ ಮೂರು ವರ್ಷದಿಂದ ಗೌರವ ಧನ ಹೆಚ್ಚಳವಾಗಿಲ್ಲ. ಇವರ ಸೇವೆ ಗುರುತಿಸಿ ಗೌರವ ಧನ ಹೆಚ್ಚಳ ಮಾಡುವಂತೆ ಒತ್ತಾಯಿಸಿದರು.


Spread the love

About Laxminews 24x7

Check Also

ಬಿಹಾರ ಫಲಿತಾಂಶ ಬಳಿಕ ಸಂಪುಟ ಪುನಾರಚನೆ?

Spread the love ಬೆಂಗಳೂರು: ಸಿಎಂ ಸಿದ್ದರಾಮಯ್ಯ ಈಗಾಗಲೇ ಸಂಪುಟ ಪುನಾರಚನೆಯ ಸುಳಿವು ನೀಡಿದ್ದಾರೆ. ಈ ನಿಟ್ಟಿ‌ನಲ್ಲಿ ಚರ್ಚೆ ನಡೆಸಲು ನ.15ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ