Breaking News

ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್: ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

Spread the love

ಬೆಂಗಳೂರು: 2021-22ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ನಿರ್ಧಿಷ್ಟ ಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ( Written Test ) ನಡೆಸುವ ಮೂಲಕ, ಭರ್ತಿ ಮಾಡಲು ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

 

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ್ದು, ಪ್ರಾಥಮಿಕ ಶಾಲಾ ಸಹಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ವಿಭಾಗದ ಹೊರಗಿನ ವರ್ಗಾವಣೆಗೆ ನ್ಯಾಯಾಲಯವು ತಡೆಯಾಜ್ಞೆ ನೀಡಿರುವುದರಿಂದ, ಈ ಹುದ್ದೆಗಳ ವರ್ಗಾವಣೆಯನ್ನು ಮಾತ್ರ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಉಳಿದಂತೆ ಎಲ್ಲಾ ವರ್ಗಾವಣೆಗಳು ಮುಕ್ತಾಯವಾಗಿರುತ್ತದೆ ಎಂದು ತಿಳಿಸಿದ್ದಾರೆ.

2021-22ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ನಿರ್ಧಷ್ಟ ಪಡಿಸಿದ ಹುದ್ದೆಗಳಿಗೆ ( Specified Post ) ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡುವ ಸಂಬಂಧ ಕೆಳಕಂಡಂತೆ ಪರಿಷ್ಕೃತ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ ಎಂದಿದ್ದಾರೆ.

ಪರಿಷ್ಕೃತ ವೇಳಾಪಟ್ಟಿಯಂತೆ ದಿನಾಂಕ 03-03-2022ರ ಇಂದಿನಿಂದ ತಾತ್ಕಾಲಿಕ ಪಟ್ಟಿಗೆ ಅಭ್ಯರ್ಥಿಗಳಿಂದ ಆಕ್ಷೇಪಣೆ ಸ್ವೀಕರಿಸೋದಕ್ಕೆ ಆರಂಭಗೊಳ್ಳಲಿದೆ. ದಿನಾಂಕ 07-03-2022ರಂದು ತಾತ್ಕಾಲಿಕ ಅರ್ಹತಾ ಪಟ್ಟಿ ಪ್ರಕಟಿಸಲಾಗುತ್ತದೆ.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ