Breaking News

ಉಪ್ಪು ಹುಳಿ ಖಾರ ಇಲ್ಲದ, ಯಾರದ್ದೋ ಒತ್ತಡದಿಂದ ಓದಿದ ಬಜೆಟ್: ಕುಮಾರಸ್ವಾಮಿ

Spread the love

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದು ಉಪ್ಪು ಉಳಿ ಖಾರ ಇಲ್ಲದ, ಯಾರದ್ದೋ ಒತ್ತಡದಿಂದ ಓದಿದ ನೀರಸ ಬಜೆಟ್ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದರು.

ಬಜೆಟ್ ಬಗ್ಗೆ ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇವಲ ಅಂಕಿ ಅಂಶಗಳನ್ನು ಅಲಂಕರಿಸಿ ಮಂಡಿಸಿದ ಬಜೆಟ್ ಇದಾಗಿದೆಯಷ್ಟೇ. ಇದು ಕೇವಲ ಅಲಂಕಾರಿಕ ಮುಂಗಡ ಪತ್ರ ಎಂದು ಅಭಿಪ್ರಾಯಪಟ್ಟರು. ಮುಖ್ಯಮಂತ್ರಿಗಳು ಅನುಭವಿಗಳು. ಐದು ವರ್ಷ ಜಲಸಂಪನ್ಮೂಲ ಸಚಿವರಾಗಿದ್ದರು. ಎರಡೂವರೆ ವರ್ಷ ಗೃಹ ಸಚಿವರಾಗಿದ್ದರು. ಆದರೂ ಅವರು ಸ್ವತಂತ್ರವಾಗಿ ಮುಂಗಡ ಪತ್ರ ಮಂಡಿಸಿರುವ ಬಗ್ಗೆ ನನಗೆ ಸಂಶಯವಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು

ಯಾರದ್ದೋ ಒತ್ತಡಕ್ಕೆ ಸಿಲುಕಿ ಮಂಡಿಸಿದಂತಿದೆ. ತಮ್ಮ ಚೊಚ್ಚಲ ಮುಂಗಡ ಪತ್ರವನ್ನೇ ಎರಡು ಗಂಟೆಗಳ ಕಾಲ ಶ್ರಮಪಟ್ಟು ಓದಿದ್ದರಾ ಅನ್ನುವುದು ನನ್ನ ಅಭಿಪ್ರಾಯ. ಅವರಿಗೆ ವಿಶ್ವಾಸದ ಕೊರತೆ ಇದ್ದಂತೆ ಇತ್ತು ಎಂದು ನನಗೆ ಅನಿಸಿತು. ಕೋವಿಡ್ ನಂತರ ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಅಸಂಖ್ಯಾತ ಜನರು ಕೆಲಸ ಕಳೆದುಕೊಂಡಿದ್ದಾರೆ. ಹೊಸದಾಗಿ ಉದ್ಯೋಗಾವಕಾಶ ಆಗುತ್ತಿಲ್ಲ. ಯುವಜನರು ಕೆಲಸಕ್ಕಾಗಿ ಅಲೆಯುತ್ತಿದ್ದಾರೆ. ಎಲ್ಲಿಯೂ ಕೆಲಸ ಸಿಗುತ್ತಿಲ್ಲ. ಆ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ. ಕೊರೊನಾದಿಂದ ಆಗಿದ್ದ ಅನಾಹುತವನ್ನು ಸುಧಾರಿಸುವ ಬಗ್ಗೆ ಬಜೆಟ್‍ನಲ್ಲಿ ಮಾತೇ ಇಲ್ಲ. ಸಂಕಷ್ಟ ಕಾಲದಲ್ಲೂ ಆದಾಯ ನಿರೀಕ್ಷೆ ಮಾಡಿದ್ದಾರೆ ಮುಖ್ಯಮಂತ್ರಿಗಳು ಎಂದು ಟೀಕಿಸಿದರು.

ಉದ್ಯೋಗ ಮತ್ತು ಜೀವನೋಪಾಯದ ಬಗ್ಗೆ ಬಜೆಟ್ ನಲ್ಲಿ ಪರಿಹಾರ ಇರುತ್ತದೆ ಎನ್ನುವುದು ನನ್ನ ಮತ್ತು ಜನರ ನಿರೀಕ್ಷೆ ಆಗಿತ್ತು. ಆದರೂ ಉದ್ಯೋಗ ಮತ್ತು ಜೀವನೋಪಾಯದ ಬಗ್ಗೆ ಏನನ್ನೂ ಹೇಳಿಲ್ಲ. ಮುಂದಿನ ದಿನಗಳಲ್ಲಿ ನಿರುದ್ಯೋಗ ಸಮಸ್ಯೆ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ