Breaking News

ಒಂದೇ ಹಳಿಯಲ್ಲಿ ಎರಡು ರೈಲು – ಅಪಾಯದಿಂದ ಪಾರಾಗುವ ಹೊಸ ತಂತ್ರಜ್ಞಾನ

Spread the love

ಭಾರತೀಯ ರೈಲ್ವೇ ಅಭಿವೃದ್ಧಿ ಪಡಿಸಿದ ಸ್ವಯಂ ಚಾಲಿತ ರೈಲು ಸಂರಕ್ಷಣಾ ವ್ಯವಸ್ಥೆ(ಎಟಿಪಿ)ಯ ಹೊಸ ‘ಕವಚ’ ತಂತ್ರಜ್ಞಾನವನ್ನು ಶುಕ್ರವಾರ ಪರೀಕ್ಷಿಸಲಾಯಿತು. ಪರೀಕ್ಷೆಯನ್ನು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಶ್ಣವ್ ಕೂಲಂಕುಶವಾಗಿ ವೀಕ್ಷಿಸಿ ತಂತ್ರಜ್ಞಾನವನ್ನು ಶ್ಲಾಘಿಸಿದ್ದಾರೆ.

ಒಂದೇ ಹಳಿಯಲ್ಲಿ ಪರಸ್ಪರ ಮುಖಾಮುಖಿಯಾಗಿ ಚಲಿಸುತ್ತಿರುವ ರೈಲುಗಳನ್ನು ಹೇಗೆ ಸ್ವಯಂ ಚಾಲಿತವಾಗಿ ನಿಯಂತ್ರಣಕ್ಕೆ ತರಬಹುದು ಎಂಬುದನ್ನು ಅಶ್ವಿನಿ ವೈಶ್ಣವ್ ವೀಕ್ಷಿಸಿದ್ದು, ಅದರ ವೀಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.ಶೂನ್ಯ ಅಪಘಾತಗಳ ಗುರಿಯೊಂದಿಗೆ ನಿರ್ಮಿಸಲಾದ ಕವಚ ತಂತ್ರಜ್ಞಾನವನ್ನು ಶುಕ್ರವಾರ ಸಿಕಂದರಾಬಾದ್‍ನಲ್ಲಿ ನೇರ ಪರೀಕ್ಷೆಗೆ ಒಳಪಡಿಸಲಾಯಿತು. ಅಶ್ವಿನಿ ವೈಷ್ಣವ್ ಅವರಿಗೆ ರೈಲಿನ ಚಾಲಕ ಹಾಗೂ ಸಿಬ್ಬಂದಿ ತಂತ್ರಜ್ಞಾನ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ವಿವರಿಸಿದರು.


Spread the love

About Laxminews 24x7

Check Also

ವಿಜಯಪುರದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ

Spread the love ವಿಜಯಪುರ: ಜಿಲ್ಲೆಯಲ್ಲಿ ಚಡಚಣ (Chadachana) ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದುವೊಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ