Breaking News

ವ್ಯಾಸಂಗ ಮುಂದುವರೆಸಲು ಭಾರತದಲ್ಲಿ ಅವಕಾಶ ಕೊಡಿ’

Spread the love

ಬೆಳಗಾವಿ: ಯುದ್ಧಪೀಡಿತ ಉಕ್ರೇನಿನಿಂದ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ವೈದ್ಯಕೀಯ ವಿದ್ಯಾರ್ಥಿ ಸುರಕ್ಷಿತವಾಗಿ ಮನೆಗೆ ತಲುಪಿದ್ದಾರೆ.ಬೈಲಹೊಂಗಲ ಪಟ್ಟಣದ ಪ್ರಜ್ವಲ್ ತಿಪ್ಪಣ್ಣವರ ಉಕ್ರೇನಿನ ಟೆರ್ನೋಪಿಲ್ ನ್ಯಾಶನಲ್ ಮೆಡಿಕಲ್ ಕಾಲೇಜಿನಲ್ಲಿ ನಾಲ್ಕನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಟೆರ್ನೋಪಿಲ್​ನಿಂದ ಮುಂಬೈ ಮಾರ್ಗವಾಗಿ ಪ್ರಜ್ವಲ್ ಬೆಳಗಾವಿಗೆ ಆಗಮಿಸಿದ್ದಾರೆ.ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರಜ್ವಲ್ ತಿಪ್ಪಣ್ಣವರ, ಬೆಳಗಾವಿ ಜಿಲ್ಲೆಯ 19 ವಿದ್ಯಾರ್ಥಿಗಳು ಉಕ್ರೇನಿನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಾರೆ. ಎಲ್ಲರಿಗೂ ಇಲ್ಲೇ ವ್ಯಾಸಂಗಕ್ಕೆ ಅವಕಾಶ ಮಾಡಿಕೊಡಬೇಕು. ಉಕ್ರೇನ್​ನಲ್ಲಿ ಶಿಕ್ಷಣಕ್ಕೆ ನೀಡುತ್ತಿದ್ದ ಶುಲ್ಕವನ್ನೇ ಸರ್ಕಾರ ನಿಗದಿಪಡಿಸಿದರೆ ಅನುಕೂಲವಾಗುತ್ತದೆ ಎಂದು ವಿನಂತಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ