Breaking News

ಮುಸುಕುಧಾರಿಗಳ ಗುಂಪೊಂದು ಕಬ್ಬಿಣದ ರಾಡ್​ನಿಂದ ಮಾರಣಾಂತಿಕ ಹಲ್ಲೆ

Spread the love

ಬೆಳಗಾವಿ: ಖಾನಾಪುರದ ಸಾಮಾಜಿಕ ಕಾರ್ಯಕರ್ತ ಜಯಂತ್ ಮುಕುಂದ್ ತಿನೇಕರ್ (62) ಎಂಬುವರ ಮೇಲೆ ದ್ವಿಚಕ್ರ ವಾಹನದಲ್ಲಿ ಬಂದ ಏಳೆಂಟು ಜನರ ಗುಂಪೊಂದು ಕಬ್ಬಿಣದ ರಾಡ್​ನಿಂದ ಹಲ್ಲೆ ನಡೆಸಿ ಪರಾರಿ ಆಗಿದೆ.ಇತ್ತ ಗಂಭೀರವಾಗಿ ಗಾಯಗೊಂಡಿದ್ದ ಜಯಂತ್​ ಅವರನ್ನು ಬೆಳಗಾವಿ ಸಿವಿಲ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಳಗಾವಿ ತಾಲೂಕಿನ ಖಾನಾಪುರ – ಬೆಳಗಾವಿ ಹೆದ್ದಾರಿಯ ಝಾಡ್ ಶಹಾಪುರ ಬಳಿ ಹಿಂಬಾಲಿಸಿಕೊಂಡು ಬಂದ ಮುಸುಕುದಾರಿಗಳು ಕಾರು ತಡೆದು ಕಬ್ಬಿಣದ ರಾಡ್​ಗಳಿಂದ ಥಳಿಸಿದ್ದಾರೆ. ಈ ವೇಳೆ, ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಕೆಲ ಲಾರಿ ಚಾಲಕರು ಸಹಾಯಕ್ಕೆ ಧಾವಿಸಿದ್ದರಿಂದ ಹೆಚ್ಚಿನ ಅಪಘಾತ ಸಂಭವಿಸಿಲ್ಲ ಎಂದು ಹೇಳಲಾಗುತ್ತಿದೆ.

ಇತ್ತ ಹಲ್ಲೆ ಮಾಡಿದ ಆರೋಪಿಗಳು ಅಪರಿಚಿತರಾಗಿದ್ದು, ಮುಖಕ್ಕೆ ಸ್ಕಾರ್ಫ್ ಹಾಕಿಕೊಂಡಿದ್ದರು. ಹೊಡೆತದ ವೇಳೆ ಜಯಂತ್​ ತಿನೇಕರ್ ಅವರ ಬಲ ಮೊಣಕಾಲು ಮುರಿದಿದ್ದು, ಬಲ ಭುಜದ ಬಳಿಯೂ ಗಂಭೀರ ಗಾಯವಾಗಿದೆ. ಖಾನಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬೆಳಗಾವಿ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ