Breaking News

ಪೋಕ್ಸೊ ಕಾಯ್ದೆ ಆರೋಪಿ ಜಾಮೀನು ಅರ್ಜಿ ಸಲ್ಲಿಸಿದರೆ ಸಂತ್ರಸ್ತರಿಗೆ ಮಾಹಿತಿ ನೀಡುವುದು ಕಡ್ಡಾಯ; ಹೈಕೋರ್ಟ್‌ ಮಹತ್ವದ ಆದೇಶ

Spread the love

ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪೋಕ್ಸೊ ಕಾಯ್ದೆಯಡಿ ಬಂಧಿತನಾಗಿರುವ ಆರೋಪಿ ಜಾಮೀನು ಅರ್ಜಿ‌ ಸಲ್ಲಿಸಿದರೆ, ಈ ಬಗ್ಗೆ ಸಂತ್ರಸ್ತರಿಗೆ ಅಥವಾ ಕೌನ್ಸಿಲ್ ಗೆ ಮಾಹಿತಿ ನೀಡುವುದು ಕಡ್ಡಾಯ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇಲಾಖೆಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

 

ಇಂತಹ ದೌರ್ಜನ್ಯಕ್ಕೊಳಗಾದ ಮಕ್ಕಳ ತಾಯಂದಿರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ, ಚೀಫ್ ಜಸ್ಟೀಸ್ ರಿತುರಾಜ್ ಅವಸ್ಥಿ ಹಾಗೂ ಜಸ್ಟೀಸ್ ಸೂರಜ್ ಗೋವಿಂದರಾಜ್ ಅವರ ವಿಭಾಗೀಯ ಪೀಠ ಈ ಮಾರ್ಗಸೂಚಿಯನ್ನು ಹೊರಡಿಸಿದೆ.

ಅರ್ಜಿದಾರರ ಪರ ವಕೀಲರಾದ ರೋಹನ್ ಕೊಠಾರಿ, ಕ್ರಿಮಿನಲ್ ಕಾನೂನು ತಿದ್ದುಪಡಿ ಕಾಯಿದೆ, 2018 ರ ಸೆಕ್ಷನ್ 439(1)(A) ಪ್ರಕಾರ, ಜಾಮೀನು ಅರ್ಜಿಯನ್ನು ಪರಿಗಣಿಸುವಾಗ ನ್ಯಾಯಾಲಯವು ರಾಜ್ಯಕ್ಕೆ ಮಾತ್ರವಲ್ಲದೆ, ದೂರುದಾರರಿಗೂ ಈ ಬಗ್ಗೆ ಮಾಹಿತಿ ನೀಡುವ ಅಗತ್ಯವಿದೆ. ಇದರಿಂದ ದೂರುದಾರರಿಗೆ ಆಕ್ಷೇಪಣೆ ಸಲ್ಲಿಸುವ ಅವಕಾಶ ದೊರೆಯುತ್ತದೆ ಎಂದು ಅರ್ಜಿ ಸಲ್ಲಿಸಿದ್ದರು.‌


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ