ಕೊಚ್ಚಿ (ಕೇರಳ) : ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕೇರಳ ಪೊಲೀಸರು ಟ್ಯಾಟೂ(Tattoo)ಕಲಾವಿದನೊಬ್ಬನನ್ನು ಶನಿವಾರ ಕೊಚ್ಚಿಯಲ್ಲಿ ಬಂಧಿಸಿದ್ದಾರೆ.
ಕೊಚ್ಚಿಯ ಎಡಪಲ್ಲಿಯಲ್ಲಿ ಟ್ಯಾಟೂ ಸ್ಟುಡಿಯೋ ನಡೆಸುತ್ತಿರುವ ಆರೋಪಿ ಸುಜೀಶ್ ಪಿಎಸ್ ವಿರುದ್ಧ ಆರು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟ್ಯಾಟೂ ಸ್ಟುಡಿಯೋದಲ್ಲಿ, ಟ್ಯಾಟೂ ಹಾಕಿಸಿಕೊಳ್ಳುವ ವೇಳೆ ಸುಜೀಶ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು 18 ವರ್ಷದ ಯುವತಿಯೊಬ್ಬಳು ಆರೋಪಿಸಿದ್ದಾರೆ.
ಸುಜೀಶ್‌ನನ್ನು ಚೇರನಲ್ಲೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.