ಮೇಕೆದಾಟು ವಿಚಾರದಲ್ಲಿ ಕೈ ನಾಯಕರ ಹೇಳಿಕೆ ವಿಚಾರಕ್ಕೆ ಯಾದಗಿರಿಯ ನಾರಾಯಣಪುರದಲ್ಲಿ ಸಚಿವ ಗೋವಿಂದ ಕಾರಜೋಳ ಖಾರವಾಗಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಕಾಂಗ್ರೆಸ್ 60 ವರ್ಷದಲ್ಲಿ ಏನೂ ಮಾಡಿಲ್ಲ. ನಾವು ಮೊದಲು 1 ಸಾವಿರ ಕೋಟಿ ಮೀಸಲಿಟ್ಟಿದ್ದೇವೆ. ಕೇಂದ್ರ ಸಚಿವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿದ್ದೇವೆ. ಮೇಕೆದಾಟು ಯೋಜನೆಯನ್ನು ಖಂಡಿತವಾಗಿ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.