Breaking News
18052015-Bangalore- Students of 2nd PU Mount Cormel college browsing result at College premises in Benglauru on Monday. DC Photo

ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

Spread the love

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಏಪ್ರಿಲ್ 22ರಿಂದ ಮೇ 18ರ ತನಕ ವಿವಿಧ ಪರೀಕ್ಷೆಗಳು ನಡೆಯಲಿವೆ.

2nd-puc-exam-final-time-table-announced-by-pu-board

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಏಪ್ರಿಲ್, ಮೇ ತಿಂಗಳಲ್ಲಿ ನಡೆಸಲು ತಯಾರಿ ನಡೆದಿತ್ತು. ಈ ಹಿಂದೆಯೂ ಪಿಯು ಬೋರ್ಡ್​ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಿತ್ತು. ಆದರೆ, ಜೆಇಇ (JEE) ಪರೀಕ್ಷೆಯ ಮೊದಲನೆಯ ಸೆಷನ್ ಏಪ್ರಿಲ್ 16ರಿಂದ 21ರವರೆಗೆ ನಡೆಸಲು ವೇಳಾಪಟ್ಟಿ ಬಿಡುಗಡೆ ಆಗಿತ್ತು. ಇದೇ ವೇಳೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಏಪ್ರಿಲ್ 16‌ರಿಂದ ಮೇ 06ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು. ಜೆಇಇ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ದಿನಾಂಕಗಳು ಒಟ್ಟಿಗೆ ಬರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯ ಪರಿಷ್ಕರಿಸಿ, ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಗೊಳಿಸಲಾಗಿತ್ತು.


Spread the love

About Laxminews 24x7

Check Also

ಬಾಬಾನಗರದ ನೆಲದಲ್ಲಿ ಹೊಸ ಕೃಷಿ ಕ್ರಾಂತಿ; ರೆಡ್ ಡೈಮಂಡ್ ಪೇರಲ ಬೆಳೆದು ಸಚಿವರಿಗೆ ಉಡುಗೊರೆ ನೀಡಿದ ರೈತ*

Spread the love : ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದಲ್ಲಿ ವ್ಯಾಪ್ತಿಯಲ್ಲಿ ಬರುವ ತಿಕೋಟಾ ತಾಲ್ಲೂಕಿನ ಬಾಬಾನಗರದ ನೆಲದಲ್ಲಿ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ