Breaking News

ಗೋವಾದಲ್ಲಿ ಮತ್ತೆ ಕುದುರೆ ವ್ಯಾಪಾರ? ಗದ್ದುಗೆ ಉಳಿಸಿಕೊಳ್ಳಲು ಬಿಜೆಪಿ ರಣತಂತ್ರ

Spread the love

ಪಣಜಿ: ಗೋವಾ ವಿಧಾನಸಭಾ ಚುನಾವಣೆಯ ಮತ ಎಣಿಕೆಗೆ ಇನ್ನೆರಡು ದಿನಗಳು ಬಾಕಿ ಉಳಿದಿದ್ದು, ಕೇಸರಿ ಪಡೆ ಅಧಿಕಾರದ ಗಾದಿ ಮರಳಿ ಹಿಡಿಯಲು ಸರ್ವ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಕ್ಷಣ ಕ್ಷಣಕ್ಕೂ ಲೆಕ್ಕಾಚಾರಗಳನ್ನು ಹಾಕುತ್ತಿದೆ.

ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು, ನಮಗೆ ಸಂಖ್ಯಾ ಬಲದ ಕೊರತೆಯಾದರೆ ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷ (ಎಂಜಿಪಿ) ಬೆಂಬಲ ಪಡೆಯಲು ಕೇಂದ್ರ ಬಿಜೆಪಿ ನಾಯಕತ್ವ ಈಗಾಗಲೇ ಮಾತುಕತೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಪಿಟಿಐ ಜೊತೆ ಮಾತನಾಡಿದ ಸಾವಂತ್, ಬಿಜೆಪಿಯು 22 ಕ್ಕೂ ಹೆಚ್ಚು ಸ್ಥಾನಗಳನ್ನು (ಬಹುಮತಕ್ಕೆ 21 ) ಪಡೆಯುವ ಆಶಾವಾದ ಹೊಂದಿದೆ, ಆದರೆ ಸಂಖ್ಯಾಬಲದ ಕೊರತೆಯಾದರೆ, ಸ್ವತಂತ್ರರು ಮತ್ತು ಎಂಜಿಪಿ ಬೆಂಬಲವನ್ನು ಪಡೆಯುವ ಆಯ್ಕೆಯನ್ನು ಸಹ ಮುಕ್ತವಾಗಿ ಇರಿಸಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ದಂಡ ಕಟ್ಟಿ ಮಾರುದ್ದದ ಚಲನ್ ಸ್ವೀಕರಿಸುತ್ತಿರುವ ವಾಹನ ಸವಾರ

Spread the loveದಾವಣಗೆರೆ: ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ಪಾವತಿ ಮಾಡಲು ಸರ್ಕಾರ ಶೇ.50% ರಿಯಾಯಿತಿ ನೀಡಿತ್ತು. ಇದರಿಂದ ವಾಹನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ