ಬೆಂಗಳೂರು: ತಮ್ಮ ಐಷಾರಾಮಿ ಜೀವನಕ್ಕಾಗಿ ಡ್ರಗ್ಸ್ ವ್ಯಾಪಾರಾ ಮಾಡುತ್ತಿದ್ದ ಪ್ರೇಮಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಸಿಗಿಲ್ ವರ್ಗಿಸ್ ಮತ್ತು ವಿಷ್ಣುಪ್ರಿಯ ಬಂಧಿತ ಆರೋಪಿಗಳು. ಬೆಂಗಳೂರಿನ ಹುಳಿಮಾವು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಏನಿದು ಪ್ರಕರಣ?
ಸಿಗಿಲ್ ವರ್ಗಿಸ್ ಮತ್ತು ವಿಷ್ಟುಪ್ರಿಯ ವಿದ್ಯಾಭ್ಯಾಸಕ್ಕಾಗಿ ಕೇರಳದಿಂದ ಬೆಂಗಳೂರಿಗೆ ಬಂದಿದ್ದರು. ಆದರೆ ಡ್ರಗ್ಸ್ ಸೇವನೆ ಚಟಕ್ಕೆ ಬಿದ್ದಿದ್ದ ಇಬ್ಬರು ಪ್ರೇಮಿಗಳು ಐಷಾರಾಮಿ ಜೀವನ ನಡೆಸಲು ಪೆಡ್ಲಿಂಗ್ ನಡೆಸಲು ಶುರುಮಾಡಿದ್ದಾರೆ.
ಕೇರಳ ಮತ್ತು ತಮಿಳುನಾಡಿನ ಕೊಯಮತ್ತೂರಿನಿಂದ ಡ್ರಗ್ಸ್ ತರಿಸಿಕೊಂಡು ಬೆಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಪೊಲೀಸರಿಗೆ ಈ ದಂಧೆಯ ಅಧಿಕೃತ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾರೆ.