Breaking News

ಪಂಜಾಬ್​ನಲ್ಲೊಬ್ಬ ಸಿಧು, ರಾಜ್ಯದಲ್ಲೊಬ್ಬ ಸಿದ್ದು – ಇಲ್ಲೂ ಕಾಂಗ್ರೆಸ್ ಅವನತಿಯಾಗುತ್ತೆ: ಜಗದೀಶ್ ಶೆಟ್ಟರ್ ಲೇವಡಿ

Spread the love

ಬೆಂಗಳೂರು: ಪಂಜಾಬ್​ನಲ್ಲಿ ಒಬ್ಬ ಸಿದ್ದು, ರಾಜ್ಯದಲ್ಲಿ ಒಬ್ಬ ಸಿದ್ದು ಇದ್ದಾರೆ. ಪಂಜಾಬ್ ಸಿಧುರಿಂದ ಅಲ್ಲಿ ಕಾಂಗ್ರೆಸ್ ನಾಶವಾಗಿದೆ.‌ ಇಲ್ಲಿನ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್​ರಿಂದ ಕಾಂಗ್ರೆಸ್​ಗೆ ಇತಿಶ್ರೀ ಬೀಳಲಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಟಾಂಗ್ ನೀಡಿದರು.

ವಿಧಾನಸೌಧದಲ್ಲಿ ಪಂಚ ರಾಜ್ಯಗಳ ಫಲಿತಾಂಶ ಬಗ್ಗೆ ಮಾತನಾಡಿದ ಅವರು, ನಾವು ನಿರೀಕ್ಷಿಸಿದಂತೆ ಫಲಿತಾಂಶ ಬಂದಿದೆ. ಚುನಾವಣಾ ಸಮೀಕ್ಷೆ ಕೂಡ ನಿಜವಾಗಿದೆ. ಉತ್ತರಾಖಂಡ್​ನಲ್ಲಿ ಅಭೂತಪೂರ್ವ ಫಲಿತಾಂಶ ಬಂದಿದೆ. 4 ರಾಜ್ಯಗಳ ಮತದಾರರಿಗೆ, ಕಾರ್ಯಕರ್ತರಿಗೆ ಅಭಿನಂದನೆಗಳು. ಈ ಫಲಿತಾಂಶ ಮುಂದಿನ ಲೋಕಸಭಾ ಚುನಾವಣೆಗೆ ಹಾಗೂ ಭಾರತದ ಭವಿಷ್ಯಕ್ಕೆ ಪೂರಕವಾಗಲಿದೆ ಎಂದರು.100 ವರ್ಷಗಳ ಕಾಂಗ್ರೆಸ್​ಗೆ ನಾಯಕತ್ವದ ಕೊರತೆ ಇದೆ. ಒಂದೇ ಕುಟುಂಬದ ಮೇಲೆ ಅವಲಂಬಿತವಾಗಿರುವುದರಿಂದ ಪಕ್ಷ ನಾಶವಾಗಲಿದೆ. ಬಿಜೆಪಿ ಒಂದೇ ಕುಟುಂಬಕ್ಕೆ ಸೀಮಿತವಾದ ಪಕ್ಷ ಅಲ್ಲ. ಇದು ಕಾರ್ಯಕರ್ತರ ಪಕ್ಷ. ಪ್ರತಿಯೊಂದು ರಾಜ್ಯದಲ್ಲೂ ಕಾಂಗ್ರೆಸ್ ಮುಕ್ತ ಆಗಲಿದೆ, ನಮ್ಮ ರಾಜ್ಯದಲ್ಲೂ ಕಾಂಗ್ರೆಸ್ ಮುಕ್ತ ಆಗಲಿದೆ. 


Spread the love

About Laxminews 24x7

Check Also

ಸಚಿವ ತಿಮ್ಮಾಪುರ ವಜಾ ಮಾಡದಿದ್ದರೆ ಸಿಎಂಗೆ 85% ಕಮಿಷನ್ ಹೋಗಿದೆ ಎಂದರ್ಥ: ಆರ್. ಅಶೋಕ್

Spread the loveಬೆಂಗಳೂರು: ಸಿದ್ದರಾಮಯ್ಯನವರ ನಿದ್ದೆ ಸರ್ಕಾರ ಇದು. ಭ್ರಷ್ಟಾಚಾರದ ಹೊಳೆಯಲ್ಲಿ ಮಿಂದು ಮೇಯುತ್ತಿದೆ. ಅಬಕಾರಿ ಸಚಿವ ತಿಮ್ಮಾಪುರ ಅವರನ್ನು ವಜಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ