Breaking News

ಡೆತ್ ನೋಟ್ ಬರೆದಿಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಕೋಚಿಂಗ್ ಪಡೆಯುತ್ತಿದ್ದ ಯುವತಿ ಆತ್ಮಹತ್ಯೆ

Spread the love

ಧಾರವಾಡ: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದ ಯುವತಿಯೋರ್ವಳು ಡೆತ್ ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಲ್ಲಿನ ಸಪ್ತಾಪುರದಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಯರಗಟ್ಟಿ ಗ್ರಾಮದ ವಿದ್ಯಾರ್ಥಿನಿ ಗೀತಾ ಹೆಗ್ಗನ್ನವರ (22) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿಯಾಗಿದ್ದು, ಸಪ್ತಾಪುರದಲ್ಲಿರುವ ಅಶ್ವಿನಿ ಪಿಜಿಯಲ್ಲಿ ವಾಸವಾಗಿದ್ದರು. ಕೋಚಿಂಗ್ ಸೆಂಟರ್​​ನಲ್ಲಿ ಕಳೆದ ಎರಡು ತಿಂಗಳಿಂದ ತರಬೇತಿ ಪಡೆಯುತ್ತಿದ್ದರು. ಒಂದೇ ರೂಮಿನಲ್ಲಿ ಮೂವರು ವಿದ್ಯಾರ್ಥಿನಿಯರು ತಂಗಿದ್ದರು ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಉಪನಗರ ಪೋಲಿಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ