Breaking News

ಐದು ರಾಜ್ಯಗಳ ಚುನಾವಣಾ ಫಲಿತಾಂಶ : ರಾಜ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ ಎಂದ ಬಿಜೆಪಿ

Spread the love

ಬೆಂಗಳೂರು: ಕರ್ನಾಟಕದ ಮೇಲೆ ಐದು ರಾಜ್ಯ ಗಳ ಚುನಾವಣಾ ಫಲಿತಾಂಶ ಸಕಾರಾತ್ಮಕವಾದ ಪರಿಣಾಮ ಬೀರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ಇನ್ನಷ್ಟು ಶಕ್ತಿ ಶಾಲಿಯಾಗಲಿದೆ. ಭಾರತೀಯ ಜನತಾ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿ, ಪಕ್ಷ ಇನ್ನಷ್ಟು ಶಕ್ತಿ ಶಾಲಿಯಾಗಿ ಮುನ್ನಡೆಯಲಿದೆ. ನಮ್ಮ ಸರ್ಕಾರ ಈಗಾಗಲೇ ಬಜೆಟ್​​ನಲ್ಲಿ ಘೋಷಣೆ ಮಾಡಿರುವಂತೆ ಉತ್ತಮ ಕಾರ್ಯಕ್ರಮಗಳ ಅನುಷ್ಠಾನ ಮಾಡುವ ಮುಖಾಂತರ ಸುಭಿಕ್ಷ, ಸುಭದ್ರವಾದ ನವ ಕರ್ನಾಟಕವನ್ನು ಒಂದು ವರ್ಷದಲ್ಲಿ ಪರಿಣಾಮಕಾರಿಯಾಗಿ ಸಾಧಿಸಿ ತೋರಿಸಿ ಜನರ ವಿಶ್ವಾಸವನ್ನು ಗಳಿಸುತ್ತದೆ. ಪರಿಣಾಮ 2023 ರಲ್ಲಿ ಇಂದು ಫಲಿತಾಂಶ ಬಂದಂತೆಯೇ ಕರ್ನಾಟಕದ ಜನತೆ ಭಾ. ಜ.ಪ ವನ್ನು ಪುನರಾಯ್ಕೆ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಜನತೆಗೆ, ಪಕ್ಷಕ್ಕೆ, ಶಾಸಕರಿಗೆ ಇಂದಿನ ಚುನಾವಣಾ ಫಲಿತಾಂಶ ಸಕಾರಾತ್ಮಕ ಉತ್ತೇಜನ ನೀಡಿದೆ. ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿ ಸರ್ಕಾರ ರಚನೆ ಮಾಡಲು ಜನರ ಆಶೀರ್ವಾದ ಪಡೆದುಕೊಂಡಿದೆ. ವಿಶೇಷವಾಗಿ ಉತ್ತರ ಪ್ರದೇಶದಲ್ಲಿ ಅತ್ಯಂತ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡು ಮತ್ತೊಮ್ಮೆ ಮೋದಿಯವರ ನೇತೃತ್ವದಲ್ಲಿ ಮೋದಿ ಮತ್ತು ಯೋಗಿಯ ಡಬಲ್ ಇಂಜಿನ್ ಸರ್ಕಾರ ಉತ್ತರ ಪ್ರದೇಶವನ್ನು ಮುನ್ನಡೆಸುವ ಕೆಲಸ ಮಾಡುತ್ತಿದೆ. ಐದು ರಾಜ್ಯಗಳ ಮತದಾರರಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ. ನಮ್ಮ ನಾಯಕರಾದ ನರೇಂದ್ರ ಮೋದಿಯವರು, ಭಾ.ಜ.ಪ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರು ಹಾಗೂ ಸಂಬಂಧಿಸಿದ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ