Breaking News

ಕೋಮು ಆಧಾರದ ಧ್ರುವೀಕರಣ ಬಿಜೆಪಿ ಗೆಲ್ಲಲು ಮುಖ್ಯ ಕಾರಣ’

Spread the love

ಬೆಂಗಳೂರು: ಉತ್ತರ ಪ್ರದೇಶದಲ್ಲಿ ಜನ ಬಿಜೆಪಿ ಗೆಲ್ಲಿಸಲು ಮುಖ್ಯ ಕಾರಣ ಅಲ್ಲಿ ಬಿಜೆಪಿ ಮಾಡುತ್ತಾ ಬಂದ ಕೋಮು ಆಧಾರದ ಧ್ರುವೀಕರಣ ಎಂದು ಸಿದ್ಧರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಪಂಚರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಬಗ್ಗೆ ವಿಶ್ಲೇಷಣೆ ಮಾಡುತ್ತಾ ಅವರು ಈ ಅಭಿಪ್ರಾಯಪಟ್ಟಿದ್ದಾರೆ.

ಚುನಾವಣೆಗಳ ಫಲಿತಾಂಶ ಎನ್ನುವುದು ಜನತೆಯ ಅಭಿಪ್ರಾಯವನ್ನು ಅರಿತುಕೊಳ್ಳಲು ಇರುವ ಅವಕಾಶ. ಅದನ್ನು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟವರೆಲ್ಲರೂ ಗೌರವಿಸಬೇಕು. ನಾನು ಗೆದ್ದ ಅಭ್ಯರ್ಥಿಗಳನ್ನು ಅಭಿನಂದಿಸುತ್ತೇನೆ. ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿದೆ, ಈ ಹಿನ್ನಡೆಯ ಬಗ್ಗೆ ನಮ್ಮ ಪಕ್ಷ ಆತ್ಮಾವಲೋಕನ ಮಾಡಿಕೊಳ್ಳಲಿದೆ.ಬಿಜೆಪಿಯ ಕೋಮುವಾದದ ರಾಜಕಾರಣ ಉತ್ತರಪ್ರದೇಶದಲ್ಲಿ ಯಶಸ್ವಿಯಾಗಿದೆ ಎನ್ನುವುದು ಈ ಫಲಿತಾಂಶದಲ್ಲಿ ಸ್ಪಷ್ಟವಾಗುತ್ತಿದೆ.ಇದು ಬಹಳ ಕಳವಳಕಾರಿ ಬೆಳವಣಿಗೆ” ಎಂದು ಅವರು ಹೇಳಿದರು.


Spread the love

About Laxminews 24x7

Check Also

ಬಜೆಟ್ ನಲ್ಲಿ ಸಾರಿಗೆ ಇಲಾಖೆಗೆ ಸಿಕ್ಕಿದ್ದೇನು?

Spread the loveಶಕ್ತಿ ಯೋಜನೆಗೆ 5,300 ಕೋಟಿ ರೂ. ಸಾರಿಗೆ ಸಿಬ್ಬಂದಿ ವೇತನ ಬಾಕಿ ಪಾವತಿಗೆ 1,271 ಕೋಟಿ ರೂ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ