ಬೆಂಗಳೂರು: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಬಲವರ್ಧನೆಗೆ ಪೊಲೀಸರ ನೇಮಕಾತಿ ( Karnataka Police Recruitment ), ನ್ಯಾಯ ವಿಜ್ಞಾನ ಪ್ರಯೋಗಾಲಯಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತದೆ. ಅಲ್ಲದೇ ಶೀಘ್ರವೇ 4000 ಸಾವಿರ ಪೊಲೀಸರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Jnanendra ) ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಸಲೀಂ ಅಹಮದ್ ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ಕಳೆದ ಐದು ವರ್ಷಗಳ ಹಿಂದೆ 35 ಸಾವಿರ ಪೊಲೀಸ್ ಹುದ್ದೆಗಳು ಖಾಲಿ ಇದ್ದವು. ಈಗ ಈ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಸಬ್ ಇನ್ ಸ್ಪೆಕ್ಟರ್ ಹುದ್ದೆಗೆ ಆಯ್ಕೆ ಮುಗಿದಿದ್ದು, ತರಬೇತಿ ನೀಡಲಾಗುತ್ತಿದೆ ಎಂದರು.