Breaking News

ವಿಧಾನಸಭೆ ಅಧಿವೇಶನದ ವೇಳೆ ಏಪ್ರಿಲ್ ಜ್ವರದ ಕುತೂಹಲ!

Spread the love

ಬೆಂಗಳೂರು: ಪಂಚರಾಜ್ಯಗಳ ಚುನಾವಣೆಯ ಫಲಿತಾಂಶವನ್ನು ಗಮನಿಸಿದ ಬಳಿಕ ರಾಜ್ಯ ರಾಜಕೀಯದಲ್ಲಿ ಹೊಸ ಅಲೆ ಶುರುವಾದಂತೆ ಭಾಸವಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ವಿಧಾನಸಭೆ ಮೊಗಸಾಲೆಯಲ್ಲಿ ಏಪ್ರಿಲ್ ರಾಜಕೀಯ ಜ್ವರ ಬಿಸಿಬಿಸಿ ಚರ್ಚೆಯಾಗಿದೆ.

ಏನಿದು ಏಪ್ರಿಲ್ ಜ್ವರ:
ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಗಾರಿ ಬಾರಿಸಿದ ಪರಿಣಾಮ ಇದೀಗ ಕರ್ನಾಟಕದಲ್ಲಿ 2023ರ ಚುನಾವಣೆಗೂ ಮುನ್ನ ರಾಜಕೀಯವಾಗಿ ಭಾರೀ ಬದಲಾವಣೆಯ ಪರ್ವ ನಡೆಯಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಅದರಲ್ಲೂ ಇದೀಗ ನಡೆಯುತ್ತಿರುವ ಬಜೆಟ್ ಅಧಿವೇಶನದ ವಿಧಾನಸಭೆ ಮೊಗಸಾಲೆಯಲ್ಲಿ ಬಿಜೆಪಿ ಶಾಸಕರಲ್ಲಿ ಏಪ್ರಿಲ್ ರಾಜಕೀಯ ಜ್ವರದ ಮಾತುಕತೆ ಕೇಳಿಬಂದಿದೆ. ಪಕ್ಷ ಮತ್ತು ಸರ್ಕಾರ ಎರಡರಲ್ಲೂ ಏಪ್ರಿಲ್‍ನಲ್ಲಿ ಬದಲಾವಣೆಗೆ ಮುಹೂರ್ತ ಫಿಕ್ಸ್ ಆಗುತ್ತೆ ಎಂಬ ಮಾತು ಕೇಳಿ ಬರುತ್ತಿದ್ದು, ಈ ಬಗ್ಗೆ ಸಚಿವರಲ್ಲಿ ಚರ್ಚೆ ಕೂಡ ನಡೆದಿದೆ ಹಾಗಾಗಿ ಏಪ್ರಿಲ್‍ನಲ್ಲಿ ರಾಜಕೀಯ ಜ್ವರ ನಾಯಕರಲ್ಲಿ ಆವರಿಸಿಕೊಳ್ಳುವ ಸಾಧ್ಯತೆ ಇದೆ.ಪಂಚರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳನ್ನು ಗೆದ್ದಿರುವ ಬಿಜೆಪಿ ಅಧಿಕಾರ ಸ್ವೀಕಾರದ ಬಳಿಕ ಕರ್ನಾಟಕದ ಕಡೆ ಮುಖ ಮಾಡಲು ಬಿಜೆಪಿ ಹೈಕಮಾಂಡ್ ಪ್ಲಾನ್ ಮಾಡುತ್ತಿದೆ. ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ, ಪದಾಧಿಕಾರಿಗಳ ಬದಲಾವಣೆ ಬಗ್ಗೆಯೂ ಬಿಜೆಪಿ ಶಾಸಕರ ನಡುವೆ ಗಂಭೀರ ಚರ್ಚೆ ನಡೆಯುತ್ತಿರುವ ಬಗ್ಗೆ ವರದಿಯಾಗಿದೆ.


Spread the love

About Laxminews 24x7

Check Also

7ನೇ ದಿನಕ್ಕೆ ಕಾಲಿಟ್ಟ ಕಬ್ಬು ಹೋರಾಟಗಾರರ ಪ್ರತಿಭಟನೆ

Spread the loveಚಿಕ್ಕೋಡಿ (ಬೆಳಗಾವಿ): ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ