Breaking News

ಕಾರ್ ಪಾರ್ಕಿಂಗ್ ವಿಚಾರಕ್ಕೆ ೨ ಕುಟುಂಬಗಳ ನಡುವೆ ಮಾರಾಮಾರಿ

Spread the love

ಧಾರವಾಡ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪಾರ್ಕಿಂಗ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ೨ ಕುಟುಂಬಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಉಣಕಲ್ ಹತ್ತಿರ ನಡೆದಿದೆ.

ಕಳೆದ ಸುಮಾರು ದಿನಗಳಿಂದ ಉಣಕಲ್ ಭಾಗದಲ್ಲಿ ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲದೇ ಜನರು ದಿನವೂ ಹೊಡೆದಾಡುವ ಪ್ರಸಂಗಗಳು ಗೋಚರಿಸುತ್ತವೆ. ಸಾರ್ವಜನಿಕರೊಬ್ಬರು ರಸ್ತೆ ಮುಂದಿನ ಮನೆಯ ಮುಂದೆ ಕಾರ್ ಪಾರ್ಕ್ ಮಾಡಿ ಹೋಟೆಲ್‌ಗೆ ಹೋಗಿದ್ದಾರೆ.

ಈ ವೇಳೆ ಇದಕ್ಕೆ ಕೋಪಗೊಂಡ ಮನೆಯವರು ಕಾರಿನ ಗ್ಲಾಸ್ ಒಡೆದು ಕಾರ್ ಚಾಲಕನಿಗೆ ಹೊಡೆದಿದ್ದಾರೆ. ಬಳಿಕ ಕಾರ್ ಚಾಲಕ ಪುನಃ ತನ್ನ ಸ್ನೇಹಿತರ ಜೊತೆಗೆ ಬಂದು ಜಗಳ ತಗೆದಿದ್ದಾನೆ. ಇಬ್ಬರ ನಡುವೆ ಮಾತಿನ ಚಕಮಕಿ ಉಂಟಾಗಿ ದೊಣ್ಣೆಯಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. 


Spread the love

About Laxminews 24x7

Check Also

ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

Spread the loveಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ