ಗೋವಾದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 96.80 ರೂ. ಹಾಗೂ ಡೀಸೆಲ್ ದರ 87.43 ರಷ್ಟಿದ್ದು, ಇದೀಗ ಏಕಾಏಕಿ 22 ರೂ. ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ..

Spread the love

ಕಾರವಾರ : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಹೆಚ್ಚಳವಾಗುತ್ತಿದ್ದಂತೆ ದೇಶದಲ್ಲಿಯೂ ಪೆಟ್ರೋಲ್, ಡಿಸೇಲ್ ದರ ಹೆಚ್ಚಳವಾಗುವ ಆತಂಕ ಎದುರಾಗಿದೆ. ಹಾಗಾಗಿ, ನೆರೆಯ ಗೋವಾ ರಾಜ್ಯಕ್ಕೆ ಗಡಿ ಪ್ರದೇಶದ ಮಂದಿ ಮುಗಿಬಿದ್ದಿದ್ದಾರೆ.

ಗೋವಾದಲ್ಲಿ ಇನ್ನೆರಡು ದಿನದಲ್ಲಿ ನಿರೀಕ್ಷಿತ ಪ್ರಮಾಣಕ್ಕಿಂತ ದುಪ್ಪಟ್ಟು ದರ ಹೆಚ್ಚಾಗಲಿದೆ ಎನ್ನಲಾಗಿದೆ. ಇದೇ ಕಾರಣಕ್ಕೆ ಪೆಟ್ರೋಲ್ ತುಂಬಿಸಿಕೊಳ್ಳಲು ಸದಾಶಿವಗಡ, ಕಾರವಾರ ಭಾಗದ ಜನ ಗಡಿಭಾಗವಾದ ಗೋವಾದ ಪೋಳೆಮ್‌ನತ್ತ ದೌಡಾಯಿಸುತ್ತಿದ್ದಾರೆ.

ಈಗಾಗಲೇ ಗೋವಾದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 96.80 ರೂ. ಹಾಗೂ ಡೀಸೆಲ್ ದರ 87.43 ರಷ್ಟಿದೆ. ಇದೀಗ ಏಕಾಏಕಿ 22 ರೂ. ಹೆಚ್ಚಾಗುವ ಸಾಧ್ಯತೆ ಇದೆ ಎಂಬ ಗುಲ್ಲೆಬ್ಬಿದೆ. ರಷ್ಯಾ ಹಾಗೂ ಉಕ್ರೇನ್ ಯುದ್ಧದಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಳವಾಗಿದೆ. ಅಲ್ಲದೆ ಚಿನ್ನದ ಬೆಲೆಯೂ ಗಗನಕ್ಕೇರಿದೆ.


Spread the love

About Laxminews 24x7

Check Also

Bigg Boss ಸೀಸನ್​-11ಕ್ಕೆ ಎಂಟ್ರಿ ಪಡೆದ ನಾಲ್ವರು ಸ್ಫರ್ಧಿಗಳು

Spread the love ಬೆಂಗಳೂರು: ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್​ಬಾಸ್ (Bigg Boss)​ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿಯೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ