Breaking News

ಗ್ರಾಮ ಪಂಚಾಯಿತಿಗೊಂದು ಗ್ರಾಮಒನ್: ರಾಜ್ಯಾದ್ಯಂತ ವಿಸ್ತರಿಸಲು ಸಂಪುಟ ಒಪ್ಪಿಗೆ

Spread the love

ಬೆಂಗಳೂರು: ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರ ಅಲೆದಾಟ ತಪ್ಪಿಸಲು ಹಂತಹಂತವಾಗಿ ಅನುಷ್ಠಾನ ಮಾಡುತ್ತಿರುವ ಗ್ರಾಮ ಒನ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ)ಯಿಂದ ಅನುಷ್ಠಾನವಾಗುತ್ತಿರುವ ಯೋಜನೆಯನ್ನು ಎಲ್ಲ ಗ್ರಾಮಗಳಿಗೂ ವಿಸ್ತರಿಸಬೇಕೆಂದು ತೀರ್ವನಿಸಲಾಯಿತು.

 

ನಮ್ಮ ಸರ್ಕಾರ ಗ್ರಾಮೀಣ ಜನರಿಗೆ ಪಂಚಾಯಿತಿ ಹಂತದಲ್ಲಿಯೇ ನಾಗರಿಕ ಸೇವೆಗಳನ್ನು ಒದಗಿಸುವ ಗ್ರಾಮ ಒನ್ ಯೋಜನೆಯನ್ನು ಜಾರಿಗೊಳಿಸಿದೆ. ತಂತ್ರಜ್ಞಾನ ಆಧಾರಿತ ಈ ಕಾರ್ಯಕ್ರಮ ಹೆಚ್ಚು ಪಾರದರ್ಶಕ ಹಾಗೂ ಜನಸ್ನೇಹಿಯಾಗಿದೆ. ಜನರ ಅಲೆದಾಟ ತಪ್ಪಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಭಾಷಣದಲ್ಲಿ ಹೇಳಿಕೊಂಡಿದ್ದರು. 


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ