Breaking News

ನಟ ಚೇತನ್ ಗೆ ಸಂಕಷ್ಟ, ಗಡೀಪಾರು ಸಾಧ್ಯತೆ

Spread the love

ಬೆಂಗಳೂರು: ‘ಆ ದಿನಗಳು’ ಖ್ಯಾತಿಯ ನಟ ಚೇತನ್ ಅವರಿಗೆ ಸಂಕಷ್ಟ ಎದುರಾಗಿದ್ದು, ಅವರನ್ನು ಗಡೀಪಾರು ಮಾಡುವ ಸಾಧ್ಯತೆ ಇದೆ. ಅಮೇರಿಕ ಪ್ರಜೆಯಾಗಿದ್ದರೂ ಚೇತನ್ ಅವರು ಭಾರತದಲ್ಲಿ ಹೋರಾಟ ನಡೆಸಿ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಅವರ ವಿರುದ್ಧ ರಾಜ್ಯ ಸರ್ಕಾರಕ್ಕೆ ಬೆಂಗಳೂರು ಪೊಲೀಸರು ವರದಿ ಸಲ್ಲಿಸಿದ್ದಾರೆ.

 

ಸಾಗರೋತ್ತರ ಭಾರತೀಯ ನಾಗರಿಕ ಪತ್ರ ನಿಯಮಗಳನ್ನು ಉಲ್ಲಂಘನೆ ಮಾಡಿದ ಆರೋಪದ ಮೇಲೆ ಚೇತನ್ ಅವರನ್ನು ಗಡೀಪಾರು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ವಿದೇಶಿ ಪ್ರಜೆಗಳು ಭಾರತದಲ್ಲಿ ಹೋರಾಟದಲ್ಲಿ ಭಾಗಿಯಾಗುವಂತಿಲ್ಲ. ಆದರೆ, ಚೇತನ್ ಅನೇಕ ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ಪೊಲೀಸರು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರ, ವಿದೇಶಾಂಗ ಇಲಾಖೆಗೆ ವರದಿ ರವಾನಿಸಲಿದೆ. ಈ ವರದಿ ಆಧರಿಸಿ ಚೇತನ್ ಅವರನ್ನು ಗಡೀಪಾರು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ