Breaking News
Home / ಜಿಲ್ಲೆ / ಕೊಪ್ಪಳ / ಅನಾವಶ್ಯಕವಾಗಿ ರಸ್ತೆಗೆ ಬಂದು ತಿರುಗಾಡುತ್ತಿದ್ದರು. ಅಂತವರಿಗೆ ಕೊಪ್ಪಳ ಪೊಲೀಸರು ವಿನೂತನ ಶಿಕ್ಷೆ ನೀಡಿದ್ದಾರೆ.

ಅನಾವಶ್ಯಕವಾಗಿ ರಸ್ತೆಗೆ ಬಂದು ತಿರುಗಾಡುತ್ತಿದ್ದರು. ಅಂತವರಿಗೆ ಕೊಪ್ಪಳ ಪೊಲೀಸರು ವಿನೂತನ ಶಿಕ್ಷೆ ನೀಡಿದ್ದಾರೆ.

Spread the love

ಕೊಪ್ಪಳ: ಲಾಕ್‍ಡೌನ್ ಶುರುವಾದಗಿನಿಂದ ಪೊಲೀಸರು ಹಗಲಿರುಳು ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೂ ಕೆಲವರು ಅನಾವಶ್ಯಕವಾಗಿ ರಸ್ತೆಗೆ ಬಂದು ತಿರುಗಾಡುತ್ತಿದ್ದರು. ಅಂತವರಿಗೆ ಕೊಪ್ಪಳ ಪೊಲೀಸರು ವಿನೂತನ ಶಿಕ್ಷೆ ನೀಡಿದ್ದಾರೆ.

ಪೊಲೀಸರು ಅನಾವಶ್ಯಕವಾಗಿ ರಸ್ತೆಯಲ್ಲಿ ತಿರುಗಾಡುತ್ತಿದ್ದ ವಾಹನ ಸವಾರರಿಗೆ ಗೋಣಿ ಚೀಲದ ಪಿಪಿಇ ಕಿಟ್ ಹಾಕಿಸಿದ್ದಾರೆ. ಈ ಮೂಲಕ ಕೊಪ್ಪಳ ನಗರ ಠಾಣಾ ಪೊಲೀಸರು ವಿಭಿನ್ನ ರೀತಿಯಲ್ಲಿ ಕೊರೊನಾ ವೈರಸ್ ಜಾಗೃತಿ ಮೂಡಿಸಿದ್ದಾರೆ.

ಭಾರತ ಲಾಕ್‍ಡೌನ್ ನಡುವೆಯೂ ವಾಹನ ಸವಾರರು ಅನಾವಶ್ಯಕವಾಗಿ ತಿರುಗಾಡುತ್ತಿದ್ದರು. ಈ ಹಿಂದೆ ಹಲವು ಬಾರಿ ಪೊಲೀಸರು ಮನೆಯಿಂದ ಹೊರಗೆ ಬಂದು ತಿರುಗಾಡುತ್ತಿದ್ದವರಿಗೆ ಎಚ್ಚರಿಕೆ ನೀಡಿದ್ದರು. ಅಲ್ಲದೇ ಪೂಜೆ ಮಾಡಿ, ಮಂಗಳಮುಖಿಯರಿಂದ ರಾಖಿ ಕಟ್ಟಿಸಿದ್ದರು. ಆದರೂ ವಾಹನ ಸವಾರರು ಪೊಲೀಸರ ಮಾತಿಗೆ ಕ್ಯಾರೆ ಎನ್ನುತ್ತಿರಲಿಲ್ಲ. ಹೀಗಾಗಿ ಪೊಲೀಸರು ಇಂದು ವಿನೂತವಾಗಿ ಗೋಣಿ ಚೀಲದ ಪಿಪಿಇ ಕಿಟ್ ಹಾಕಿಸಿದ್ದಾರು

.

ಗೋಣಿ ಚೀಲದಿಂದ ಮಾಡಿದ ಮಾದರಿ ಪಿಪಿಇ ಕಿಟ್ ಹಾಕಿಸಿದ್ದರು. ಗೋಣಿ ಚೀಲದ ಮಾಸ್ಕ್, ಹ್ಯಾಂಡ್ ಗ್ಲೌಸ್ ಹಾಕಿಸಿದ್ದರು. ನಂತರ ಅನಾವಶ್ಯಕವಾಗಿ ತಿರುಗಾಡುವವವರಿಗೆ ಪಿಪಿಇ ಕಿಟ್ ಹಾಕಿಕೊಂಡವರು ತಿಳಿ ಹೇಳಿದ್ದಾರೆ.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ