Breaking News

ಸತತ ಸೋಲು ಗಂಭೀರವಾದ ವಿಚಾರ : ಜಿ-23 ಸಭೆಯಲ್ಲಿ ಕಾಂಗ್ರೆಸ್ ನಾಯಕರ ಅಭಿಪ್ರಾಯ​

Spread the love

ನವದೆಹಲಿ : ಇತ್ತೀಚೆಗೆ ನಡೆದ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರಾಭವಗೊಂಡಿದ್ದು, ಈ ಹಿನ್ನೆಲೆಯಲ್ಲಿ ಸೋಲಿನ ವಿಶ್ಲೇಷಣೆಗಾಗಿ ಗ್ರೂಪ್- 23ರ ಭಾಗವಾಗಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಗುಲಾಂ ನಬಿ ಆಜಾದ್ ಅವರ ನಿವಾಸದಲ್ಲಿ ಸಭೆ ನಡೆಸಿದರು.

ಈ ಸಭೆಯಲ್ಲಿ ಚುನಾವಣೆಗಳಲ್ಲಿ ಪಕ್ಷದ ಸತತ ಸೋಲಿನ ಬಗ್ಗೆ ಕಳವಳ ವ್ಯಕ್ತವಾಯಿತು.

ಮೂಲಗಳ ಪ್ರಕಾರ ಈ ಸಭೆಯಲ್ಲಿ ಭಾಗವಹಿಸಿದ್ದ ಕೆಲವು ನಾಯಕರು ಮುಂದಿನ ಕಾರ್ಯಕಾರಿ ಸಮಿತಿಯಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಕೆಲವು ಮುಖ್ಯಮಂತ್ರಿಗಳು, ಯುವ ಕಾಂಗ್ರೆಸ್ ಮುಖಂಡರು ಕೇವಲ ಗಾಂಧಿ ಕುಟುಂಬದ ಪರವಾಗಿರುವ ಕಾರಣದಿಂದ ತಾವು ಕಾರ್ಯಕಾರಿ ಸಮಿತಿಯಿಂದ ಹೊರಗೆ ಉಳಿಯುವುದಾಗಿ ಹೇಳಿದ್ದಾರೆ. ಯಾವುದೇ ಗಂಭೀರ ವಿಚಾರವನ್ನ ಸಭೆಯಲ್ಲಿ ಚರ್ಚಿಸಿಲ್ಲ ಎಂದು ತಿಳಿದು ಬಂದಿದೆ.

ಗ್ರೂಪ್ 23 ಸಮೂಹದ ಭಾಗವಾಗಿರುವ ಆನಂದ್ ಶರ್ಮಾ ಮಾತನಾಡಿ, ಸಭೆಯಲ್ಲಿ ಕೆಲವರು ಸಮರ್ಥವಾಗಿ ಮಾತನಾಡಿದರೆ, ಇನ್ನೂ ಕೆಲವರು ಸಮರ್ಥವಾಗಿ ಮಾತನಾಡುವವರನ್ನು ತಮ್ಮ ಹಿತಾಸಕ್ತಿಯ ರಕ್ಷಣೆಗಾಗಿ ಅವರನ್ನು ವಿರೋಧಿಸುತ್ತಾರೆ. ಇದರಿಂದಾಗಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರು ಮಾತ್ರವೇ ಈ ಸಭೆಯಲ್ಲಿ ಪಾಲ್ಗೊಳ್ಳಬೇಕು. ಮುಂದಿನ ಕೆಲವೇ ದಿನಗಳಲ್ಲಿ ಗ್ರೂಪ್-23 ನಾಯಕರ ಸಭೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ