Breaking News

ಬೆಂಗಳೂರು; ನಿಂತಿದ್ದ ವಾಹನಗಳಿಂದ ಡೀಸೆಲ್​ ಕದಿಯುತ್ತಿದ್ದ ಕಳ್ಳರ ಕಾಲಿಗೆ ಗುಂಡಿಟ್ಟ ಪೊಲೀಸ್

Spread the love

ಬೆಂಗಳೂರು: ರಾತ್ರಿ ವೇಳೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್​ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಕಾಲಿಗೆ ಗುಂಡು ಹಾರಿಸಿರುವ ಪೊಲೀಸರು, ಆರೋಪಿಗಳನ್ನು ಬಂಧನ ಮಾಡಿರೋ ಘಟನೆ ಬೆಂಗಳೂರು ಹೊರವಲಯದ ಆನೇಕಲ್​ ಬಳಿ ನಡೆದಿದೆ.

ಶ್ರೀನಿವಾಸ್ ಅಲಿಯಾಸ್ ರಾಜು ಗುಂಡೇಟು ತಿಂದ ಆರೋಪಿಯಾಗಿದ್ದು, ಇಂದು ಮುಂಜಾನೆ 5 ಗಂಟೆ ಸಮಯದಲ್ಲಿ ಘಟನೆ ನಡೆದಿದೆ. ಟಾಟಾ ಸುಮೋನಲ್ಲಿ ಬಂದು ಲಾರಿಗಳಲ್ಲಿ ಡೀಸೆಲ್ ಕದಿಯುತ್ತಿದ್ದ ಖತರ್ನಾಕ್ ಗ್ಯಾಂಗ್, ಆನೇಕಲ್​​ನ ಜಿಗಣಿಯ ಕೆಇಬಿ ಸರ್ಕಲ್ ಬಳಿ ಲಾರಿಯೊಂದರಲ್ಲಿ ಡೀಸೆಲ್​ ಕಾಯುತ್ತಿದ್ದ ವೇಳೆ ರೆಡ್​ಹ್ಯಾಂಡ್​ ಆಗಿ ಪೊಲೀಸರ ಕೈಗೆ ಸಿಕ್ಕಿಬಿದ್ದರು. ಕಳ್ಳತನ ಮಾಡೋ ವೇಳೆ ಪೊಲೀಸರು ದಾಳಿ ಮಾಡಿದ್ದರು. ಕೂಡಲೇ ತಮ್ಮ ಬಳಿ ಇದ್ದ ಮಾರಕಾಸ್ತ್ರಗಳಿಂದ ಪೊಲೀಸರ ಮೇಲೆ ದಾಳಿಗೆ ಮುಂದಾಗಿದ್ದರು. ಕೂಡಲೇ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.


Spread the love

About Laxminews 24x7

Check Also

ಮತ್ತೆ ಪಾಚಿಕಟ್ಟಿದ ಸುವರ್ಣ ಸೌಧ:

Spread the loveಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತೆ ಪಾಚಿಕಟ್ಟಿದೆ. ಸ್ವಚ್ಛತೆಗೆ ಅನುದಾನ ಕೊರತೆ ಎದುರಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ