Breaking News

ಚಲಿಸುವ ರೈಲಿನಿಂದ ಬಿದ್ದು ಅಪರಿಚಿತ ಯುವಕ- ಯುವತಿ ಸಾವನ್ನಪ್ಪಿರುವ ಘಟನೆ

Spread the love

ವಿಜಯನಗರ; ಚಲಿಸುವ ರೈಲಿನಿಂದ ಬಿದ್ದು ಅಪರಿಚಿತ ಯುವಕ- ಯುವತಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕೊಟಗಿನಾಳ್ ಗ್ರಾಮದ ಬಳಿ ನಡೆದಿದೆ.

ಬಳ್ಳಾರಿಯಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ರೈಲಿನಿಂದ ಯುವಕ-ಯುವತಿ ಬಿದ್ದಿರೋ ಶಂಕೆ ಕಂಡು ಬಂದಿದೆ. ರೈಲ್ವೆ ಹಳಿಯಿಂದ 50 ಅಡಿ ದೂರದಲ್ಲಿ ಯುವತಿ ಮತ್ತು ಯುವಕನ ಮೃತದೇಹ ಪತ್ತೆಯಾಗಿದೆ. ಮೃತರ ಹೆಸರು, ವಿಳಾಸದ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಇಬ್ಬರ ಮೊಬೈಲ್​​ಗಳು ಆಫ್​ ಆಗಿದ್ದು, ಸ್ಥಳಕ್ಕೆ ಬಳ್ಳಾರಿ ರೈಲ್ವೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕ-ಯುವತಿ ಇಬ್ಬರ ವಯಸ್ಸು 20 ರಿಂದ 21 ಎಂದು ಅಂದಾಜಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ