ಲಕ್ನೋ: ಬಿಜೆಪಿಯ ಚುನಾವಣಾ ಪ್ರಚಾರದ ಹಾಡುಗಳಿಗೆ ನೃತ್ಯ ಮಾಡುತ್ತಿದ್ದ ಗ್ರಾಮಸ್ಥರ ಮೇಲೆ ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಕಾನ್ಪುರ ದೇಹತ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಜಿಲ್ಲೆಯ ರಸೂಲಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಸಂಭ್ರಮಾಚರಣೆಗಾಗಿ ತಮ್ಮ ಮನೆಯಲ್ಲಿ ಡಿಜೆ ಹಾಕಿ ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ಥಳೀಯರು ಬಿಜೆಪಿ ಚುನಾವಣಾ ಥೀಮ್ ಸಾಂಗ್‍ಗಳಿಗೆ ಕುಣಿಯುತ್ತಿದ್ದರು. ಸ್ಥಳಕ್ಕೆ ಬಂದ ಸಮಾಜವಾದಿ ಪಕ್ಷದ ಕಾರ್ಯಕರ್ತರು ಬಿಜೆಪಿ ಚುನಾವಣಾ ಥೀಮ್ ಹಾಡುಗಳನ್ನು ಪ್ಲೇ ಮಾಡುವುದನ್ನು ನಿಲ್ಲಿಸುವಂತೆ ಡಿಜೆ ಆಯೋಜಕರನ್ನು ಕೇಳಿದರು. ಡಿಜೆ ಆಯೋಜಕರು ಕೇಳದೆ ಇದ್ದಾಗ ಆತನನ್ನು ನಿಂದಿಸಿ, ಥಳಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.